SEMINAR ON DISEASES

Held by SANJEEVINI eco club GHS talewad.

SBNN GOVT HIGH SCHOOL, TALEWAD

Our beatifu school with coverd lott of trees and garden.

INTERNATIONAL YOGA DAY

300 above students participated in this celebration.

PATIBHA KARANJI AT MULAWAD

Our students participated and won many events.

PRACTICAL IN ATL LAB

Our students participated in atal thinkaring lab.

Thursday, September 28, 2023

ಮೌಲಾನಾ ಅಬ್ದುಲ್ ಕಲಾಂ ಅಜಾದ್ ಜಯಂತಿ

ಮೌಲಾನಾ ಅಬ್ದುಲ್ ಕಲಾಂ ಅ


ಜಾದ್ ಜಯಂತಿ

ವಿವಿಧತೆಯಲ್ಲಿ ಏಕತೆಯ ನೆಲೆಯಾದ ಭಾರತದಲ್ಲಿ ಹಿಂದೂ ಮುಸ್ಲಿಮರಿಬ್ಬರೂ ಸೌಹಾರ್ದತೆಯಿಂದ ಒಟ್ಟಿಗೆ ಬಾಳಬೇಕು. ಧರ್ಮಕ್ಕೂ, ಮನುಷ್ಯನು ಯಾವ ರಾಷ್ಟ್ರಕ್ಕೆ ಸೇರಿದವನು ಎಂಬುವುದಕ್ಕೂ ಯಾವುದೇ ಸಂಬಂಧವಿಲ್ಲವೆಂದು ನಂಬಿ ಆ ಆದರ್ಶಕ್ಕಾಗಿ ತಮ್ಮ ಜೀವನದುದ್ದಕ್ಕೂ ಶ್ರಮಿಸಿದವರೇ ಮೌಲಾನಾ ಅಬ್ದುಲ್‌ ಕಲಾಂ ಆಜಾದ್‌.

ದೇಶದ ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಯನ್ನು ಪರಿಗಣಿಸಿ ಅವರ ಜನ್ಮದಿನವನ್ನೇ ರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ ಆಚರಿಸಲಾಗುತ್ತದೆ.

11 ನವೆಂಬರ್‌ 1888ರಲ್ಲಿ ಮೆಕ್ಕಾದಲ್ಲಿ ಜನಿಸಿದ ಮೌಲಾನಾ ಆಜಾದ್‌ರ ಪೂರ್ಣ ಹೆಸರು ಅಬ್ದುಲ್‌ ಕಲಾಂ ಘುಲಮ ಮಹಿಯುದ್ದಿನ್‌. ಇವರು ಅರೇಬಿಕ್‌, ಪರ್ಷಿಯನ್‌, ಉರ್ದು ಮತ್ತು ಇಸ್ಲಾಂ ತಾತ್ವಿಕ ಕ್ಷೇತ್ರದ ಮಹಾನ್‌ ವಿದ್ವಾಂಸರಾಗಿದ್ದರು. ಆಜಾದರ ತಂದೆ ತಾಯಿಗಳಿಬ್ಬರೂ ಅಸಾಧಾರಣ ವಿದ್ವಾಂಸರಾಗಿದ್ದವರು. ಇಸ್ಲಾಂ ಧರ್ಮವನ್ನು ಆಳವಾಗಿ ಅಧ್ಯಯನ ಮಾಡಿದ್ದರು. ಆಜಾದರು ಚಿಕ್ಕ ವಯಸ್ಸಿನಲ್ಲಿಯೇ ಇಸ್ಲಾಂ ಧರ್ಮದ ಅಧ್ಯಯನವನ್ನು ಶ್ರದ್ಧೆಯಿಂದ ಮಾಡಿದ್ದರು. ಆಜಾದರಿಗೆ ಪತ್ರಿಕೋದ್ಯಮದಲ್ಲಿಯೂ ಹೆಚ್ಚಿನ ಆಸಕ್ತಿಯಿತ್ತು. ತಮ್ಮ 16ನೇ ವಯಸ್ಸಿನಲ್ಲಿಯೇ ಆಜಾದ್‌ ಎಂಬ ಅಂಕಿತ ನಾಮವನ್ನಿಟ್ಟುಕೊಂಡು ಪತ್ರಿಕಾ ಪ್ರಪಂಚಕ್ಕಿಳಿದು ಅಲ್‌ ಸಿದ್ವಾ ಎಂಬ ಪತ್ರಿಕೆಯಲ್ಲಿ ಲೇಖನಗಳನ್ನು ಬರೆಯುತ್ತಿದ್ದರು.

ಮುಸ್ಲಿಮರು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಒಂದು ಸಮುದಾಯದ ಅಭಿವೃದ್ಧಿಗೆ ಶಿಕ್ಷಣ ಪ್ರಮುಖ ಸಾಧನ. ಹೀಗಾಗಿ ಅವರು ಶಿಕ್ಷಣ ಪಡೆದು, ಮೂಢನಂಬಿಕೆಗಳನ್ನು ಮೆಟ್ಟಿ ಸಮಾಜದ ಸುಧಾರಣೆ ಮಾಡಿಕೊಳ್ಳಬೇಕು ಮತ್ತು ಮುಸ್ಲಿಂ ಸಮುದಾಯ ಮುಖ್ಯವಾಹಿನಿಗೆ ಬರಬೇಕು ಎನ್ನುವುದು ಆಜಾದರ ಹಂಬಲವಾಗಿತ್ತು.

ಪತ್ರಿಕಾ ಅಸ್ತ್ರಕ್ಕೆ ಬ್ರಿಟಿಷ್‌ ಕೊಕ್ಕೆ

ತಮ್ಮ 24ನೇ ವಯಸ್ಸಿನಲ್ಲಿ ಅಲ್‌ ಹಿಲಾಲ್‌ ಎಂಬ ಉರ್ದು ಪತ್ರಿಕೆಯನ್ನು ಆಜಾದ್‌ ಪ್ರಾರಂಭಿಸಿದರು. ಹಿಂದು-ಮುಸ್ಲಿಮರು ನಾವೆಲ್ಲರೂ ಒಂದು ಎಂಬ ಭಾವದಿಂದ ಸಹೋದರರಾಗಿ ಬಾಳಬೇಕು ಎಂಬುದು ಇವರ ಮೂಲ ಮಂತ್ರವಾಗಿತ್ತು. ಹಿಂದು-ಮುಸ್ಲಿಮರು ಒಂದಾದರೆ ತಾವು ಗಂಟುಮೂಟೆ ಕಟ್ಟಿಕೊಂಡು ಹೊರಡಬೇಕಾಗುತ್ತದೆಂದು ಬ್ರಿಟಿಷರಿಗೆ ಅರ್ಥವಾಯಿತು. ಅವರು ಈ ಒಗ್ಗಟ್ಟನ್ನು ಮುರಿಯಲು ಸರ್ವಪ್ರಯತ್ನಗಳನ್ನು ಮಾಡಿದರು. ಹಿಂದು-ಮುಸ್ಲಿಮರು ಅನ್ಯೋನ್ಯವಾಗಿ ಇರಬೇಕೆಂದು ಸಾರುತ್ತಿದ್ದ ಆಜಾದರು ಬ್ರಿಟಿಷ್‌ ಸರ್ಕಾರದ ಹಾದಿಯಲ್ಲಿ ಮುಳ್ಳಾದರು. ಬ್ರಿಟಿಷರ ಜನ ವಿರೋಧಿ ನೀತಿ, ಭಾರತೀಯ ನಾಗರಿಕರಿಗೆ ನೀಡುತ್ತಿರುವ ಕಿರುಕುಳ ಮುಂತಾದ ಕ್ರಾಂತಿಕಾರಿ ವಿಚಾರಗಳನ್ನು ಅಲ್‌ ಹಿಲಾಲ್‌ ವಾರಪತ್ರಿಕೆಯ ಮೂಲಕ ಜನರಿಗೆ ಮುಟ್ಟಿಸುತ್ತಿದ್ದರು. ಈ ಪತ್ರಿಕೆಯ 26000 ಪ್ರತಿಗಳು ಮಾರಾಟವಾಗುತ್ತಿದ್ದವು. ಇದರಿಂದ ಕೆಂಡಾಮಂಡಲವಾದ ಬ್ರಿಟಿಷ್‌ ಸರ್ಕಾರ 1914ರಲ್ಲಿ ಅಲ್‌ ಹಿಲಾಲ್‌ ಪತ್ರಿಕೆಯ ಮೇಲೆ ನಿಷೇಧ ಹೇರಿತು. ಇದರಿಂದ ವಿಚಲಿತರಾಗದ ಆಜಾದರು ಕೆಲವೇ ತಿಂಗಳಲ್ಲಿ ಅಲ್‌ ಬಲಾಘ… ಎನ್ನುವ ಮತ್ತೂಂದು ವಾರಪತ್ರಿಕೆಯನ್ನು ಪ್ರಾರಂಭಿಸಿ ಮೊದಲಿನಂತೆಯೇ ಬ್ರಿಟಿಷ್‌ ಸರ್ಕಾರವನ್ನು ಟೀಕಿಸಲು ಪ್ರಾರಂಭಿಸಿದರು. ಸರ್ಕಾರವು ಇವರಿಗೆ ರಾಂಚಿಯನ್ನು ಬಿಟ್ಟು ಹೊರಹೋಗಕೂಡದೆಂದು ನಿರ್ಬಂಧ ವಿಧಿಸಿತು.

ಬ್ರಿಟಿಷ್‌ ಸರ್ಕಾರ ಭಾರತದ ಆಡಳಿತದಲ್ಲಿ ಕೆಲವು ಸುಧಾರಣೆಗಳನ್ನು ಘೋಷಿಸಿತು. ಆದರೆ ಇವು ಏನೂ ಸಾಲದು ಹಾಗೂ ಜನಪರ ಸುಧಾರಣೆಗಳಲ್ಲ ಎಂದು ಆಜಾದರು ವಿರೋಧಿಸಿದರು. ಸರ್ಕಾರ ಮತ್ತೆ ಇವರನ್ನು ಒಂದು ವರ್ಷಕಾಲ ಸೆರೆಮನೆಯಲ್ಲಿ ಬಂಧಿಸಿಡುತ್ತದೆ. ಸದಾ ರಾಷ್ಟ್ರದ ಏಕತೆಯನ್ನು ಪ್ರತಿಪಾದಿಸುತ್ತಿದ್ದ ಆಜಾದರು ಮಹಾತ್ಮಾ ಗಾಂಧೀಜಿಯವರ ಅನುಯಾಯಿಯಾಗಿದ್ದರು. 1942ರ ಭಾರತ ಬಿಟ್ಟು ತೊಲಗಿ ಚಳವಳಿ ಪ್ರಾರಂಭವಾಗುತ್ತಲೇ ಸರ್ಕಾರ ಇವರನ್ನು ದಸ್ತಗಿರಿ ಮಾಡಿ ಜೈಲಿಗೆ ಕಳುಹಿಸಿತು. 1945ರಲ್ಲಿ ಕಾಂಗ್ರೆಸ್‌ ನಾಯಕರ ಬಿಡುಗಡೆಯಾಯಿತು. ಅಲ್ಲಿಂದ ಸುಮಾರು ಒಂದು ವರ್ಷ ಕಾಲ ಬ್ರಿಟಿಷ್‌ ಸರ್ಕಾರದೊಂದಿಗೆ ಮಾತುಕತೆಗಳಾದವು. ಆಗ ಕಾಂಗ್ರೆಸ್‌ನ ಅಧ್ಯಕ್ಷರಾಗಿದ್ದ ಆಜಾದರು ಹಿಂದು-ಮುಸ್ಲಿಮರ ಸ್ನೇಹದ ತಮ್ಮ ನೀತಿಯನ್ನು ಪ್ರತಿಪಾದಿಸಿದರು. ಪ್ರತ್ಯೇಕ ರಾಷ್ಟ್ರ ಪಾಕಿಸ್ತಾನದ ಬೇಡಿಕೆಯನ್ನಿಟ್ಟ ಮುಸ್ಲಿಮರೆಲ್ಲರೂ ಆಜಾದರನ್ನು ಮೂದಲಿಸಿದರು, ಅವಹೇಳನ ಮಾಡಿದರು. ಆದರೆ ಆಜಾದರು ಹಿಂದು-ಮುಸ್ಲಿಮರ ಏಕತೆಯ ತಮ್ಮ ದೃಢನಂಬಿಕೆಯನ್ನು ಬಿಟ್ಟುಕೊಡಲಿಲ್ಲ.

ದೇಶದ ಮೊದಲ ಶಿಕ್ಷಣ ಮಂತ್ರಿ

ಸ್ವತಂತ್ರ ಭಾರತದ ಜವಾಹರಲಾಲ್‌ ನೆಹರೂ ಮಂತ್ರಿ ಮಂಡಲದಲ್ಲಿ 1958ರ ಫೆಬ್ರುವರಿ 22ರವರೆಗೂ ಭಾರತ ಸರ್ಕಾರದ ಮೊಟ್ಟಮೊದಲ ವಿದ್ಯಾ ಮಂತ್ರಿಯಾಗಿ ಆಜಾದ್‌ ಕಾರ್ಯನಿರ್ವಹಿಸಿದರು. ಪ್ರಾಥಮಿಕ, ಮಾಧ್ಯಮಿಕ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹಲವಾರು ಫ‌ಲಪ್ರದ ಯೋಜನೆಗಳನ್ನು ಜಾರಿಗೊಳಿಸಿದರು. ವೈಜಾnನಿಕ ಶಿಕ್ಷಣಕ್ಕೆ ಮಹತ್ವ ನೀಡಿದ್ದಲ್ಲದೆ, ವಿಶ್ವವಿದ್ಯಾಲಯಗಳ ಸ್ಥಾಪನೆ ಮಾಡಿದರು. ಇಂದಿನ ವಿದ್ಯಾರ್ಥಿಗಳ ಪ್ರಥಮಾದ್ಯತೆಯ ಐಐಟಿ ಸಂಸ್ಥೆ ಹಾಗೂ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) ಸ್ಥಾಪನೆ ಮಾಡಿದ ಕೀರ್ತಿ ಆಜಾದರಿಗೆ ಸಲ್ಲುತ್ತದೆ. ಇವರ ಪ್ರಸಿದ್ಧ ಆತ್ಮಕಥನ "ಇಂಡಿಯಾ ವಿನ್ಸ್‌ ಫ್ರೀಡಂ' ಪ್ರಸಿದ್ಧಿಯ ಜೊತೆಗೆ ಚರ್ಚಾಸ್ಪದ ಕೃತಿಯಾಗಿದೆ. ಸರ್ಕಾರವು ಮೌಲಾನಾ ಆಜಾದ್‌ರ ಕೊಡುಗೆಗಳನ್ನು ಗಣಿಸಿ 1992ರಲ್ಲಿ ದೇಶದ ಅತ್ಯುನ್ನತ ಗೌರವವಾದ ಭಾರತ ರತ್ನ ಪ್ರಶಸ್ತಿ ನೀಡಿ ಅವರ ಕೊಡುಗೆಗಳನ್ನು ಗೌರವಿಸಿದೆ.

ಆಜಾದ್‌ ಕನಸು ನನಸಾಗಿಸೋಣ

ರಾಷ್ಟ್ರಮಟ್ಟದಲ್ಲಿ ಈಗ ಶಿಕ್ಷಣ ಸಚಿವಾಲಯ ಇಲ್ಲ. ಅದೇ ಮಾನವ ಸಂಪನ್ಮೂಲ ಸಚಿವಾಲಯವಾಗಿದೆ. ಆಜಾದ್‌ರ ಕಾಲದಿಂದ ಇಲ್ಲಿಯವರಗೆ ದೇಶದ ಶಿಕ್ಷಣ ವ್ಯವಸ್ಥೆ ಹಲವು ಹಂತಗಳನ್ನು ದಾಟಿ ಮುಂದೆ ಬಂದಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಭಾರತ ಎಷ್ಟೇ ಸುಧಾರಿಸಿದೆ ಎಂದು ನಾವು ಹೇಳಿದರೂ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಹಲವು ಲೋಪದೋಷಗಳು ಇನ್ನೂ ಉಳಿದುಕೊಂಡಿವೆ. ಮುಖ್ಯವಾಗಿ, ಮಕ್ಕಳಿಗೆ ಬದುಕುವ ಶಿಕ್ಷಣವನ್ನು ನಾವು ನೀಡುತ್ತಿಲ್ಲ. ಉದ್ಯೋಗ ಗಿಟ್ಟಿಸಿಕೊಳ್ಳುವ ಶಿಕ್ಷಣವನ್ನಷ್ಟೇ ನೀಡುತ್ತಿದ್ದೇವೆ.

ಮೌಲಾನಾ ಅಬ್ದುಲ್‌ ಕಲಾಂ ಆಜಾದ್‌ರ ಜನ್ಮದಿನವನ್ನು ಶಿಕ್ಷಣ ದಿನವನ್ನಾಗಿ ಆಚರಿಸುವ ನಾವು ಇದನ್ನು ಕೇವಲ ಸಾಂಕೇತಿಕ ಆಚರಣೆಗಷ್ಟೇ ಸೀಮಿತಗೊಳಿಸಬಾರದು. ಹಾಗೆ ಮಾಡಿದರೆ ಅದು ಆಜಾದ್‌ ಅವರ ವ್ಯಕ್ತಿತ್ವಕ್ಕೆ ಎಸಗುವ ಅಪಚಾರ. ದೇಶದ ಶಿಕ್ಷಣ ಕ್ಷೇತ್ರಕ್ಕೆ ಆರಂಭಿಕ ದಿನಗಳಲ್ಲಿ ಭದ್ರ ಬುನಾದಿ ಹಾಕಿದ ಆಜಾದ್‌ ಜನಿಸಿ ಇಂದಿಗೆ 126 ವರ್ಷಗಳಾದವು. ಈಗಲೂ ನಾವು ಶೈಕ್ಷಣಿಕ ಸುಧಾರಣೆಯ ಬಗ್ಗೆ ಮಾತನಾಡುತ್ತಿದ್ದೇವೆಯೇ ಹೊರತು ನಿಜವಾದ ಶ್ರಮ ಹಾಕಿ ಶಿಕ್ಷಣ ವ್ಯವಸ್ಥೆಯನ್ನು ಮೇಲೆತ್ತುತ್ತಿಲ್ಲ ಎಂಬುದು ವಿಪರ್ಯಾಸ.

"ಶಿಕ್ಷಣವೆಂಬುದು ಎಲ್ಲರ ಆಜನ್ಮ ಸಿದ್ಧ ಹಕ್ಕು. ಅದನ್ನು ಪಡೆಯದೆ ವ್ಯಕ್ತಿಯೊಬ್ಬ ಪರಿಪೂರ್ಣ ಪ್ರಜೆಯಾಗಲಾರ' ಎಂದು 50 ವರ್ಷಗಳ ಹಿಂದೆಯೇ ಆಜಾದ್‌ ಹೇಳಿದ್ದರು. ಇಂದಿಗೂ ನಮ್ಮಲ್ಲಿ ಶಿಕ್ಷಣದಿಂದ ವಂಚಿತರಾಗುವ ಲಕ್ಷಾಂತರ ಮಕ್ಕಳಿದ್ದಾರೆ. ಭಾರತ ಬೆಳೆಯುತ್ತಿದೆ ಎಂದು ಹೇಳಿಕೊಳ್ಳುವ ನಾವು, ಪ್ರತಿಯೊಂದು ಮಗುವಿಗೂ ಕನಿಷ್ಠ ಶಿಕ್ಷಣ ಸಿಗುವಂತೆ ಮಾಡುವಲ್ಲಿ ಎಲ್ಲಿಯವರೆಗೆ ಯಶಸ್ವಿಯಾಗುವುದಿಲ್ಲವೋ ಅಲ್ಲಿಯವರೆಗೆ ಆಜಾದ್‌ರ ಕನಸು ನನಸಾಗದು.

ಮಾಹಿತಿ ಕೃಪೆ : ಉದಯವಾಣಿ

ಮಕ್ಕಳ ದಿನಾಚರಣೆ

 


ಜವಾಹರ್ ಲಾಲ್ ನೆಹರು

ಜವಾಹರರಿಗೆ ಮೊದಲಿನಿಂದಲೂ ಮಕ್ಕಳೆಂದರೆ ಬಹಳ ಪ್ರೀತಿ.ಮಕ್ಕಳೊಡನೆ ಆಟವಾಡುವುದೆಂದರೆ ಆನಂದ. ಸ್ವತಂತ್ರ ಭಾರತದ ಪ್ರಧಾನಮಂತ್ರಿಯಾಗಿ ದಿನವಿಡೀ ದುಡಿತ ವಿದ್ದಾಗಲೂ ಅವರು ಮಕ್ಕಳೊಡನೆ ಆಡುವ ಪ್ರಸಂಗ ತಪ್ಪಿಸುತ್ತಿರಲಿಲ್ಲ. ಯಾವುದೇ ಸಭೆಗೆ ಹೋಗಿರಲಿ, ಎಷ್ಟೇ ಅವಸರದ ಕಾರ್ಯಕ್ರಮವಿರಲಿ ಅವರು ಮಕ್ಕಳನ್ನು ನೋಡಿದ ಕೂಡಲೆ ಎತ್ತಿ ಮುದ್ದಾಡುತ್ತಿದ್ದರು. ‘‘ನಿಜವಾದ ಜವಾಹರರನ್ನು ನೋಡಬೇಕಾದರೆ ಅವರು ಮಕ್ಕಳೊಂದಿಗೆ ಇರುವಾಗ ನೋಡಬೇಕು. ಮಕ್ಕಳಂತೆಯೇ ಮಾತನಾಡಿ, ಅವರ ಹಾಗೆಯೇ ಆಟವಾಡಿ ನಲಿದು ಆನಂದಪಡುತ್ತಾರೆ’’ ಎಂದು ಅವರ ತಂಗಿ ಶ್ರೀಮತಿ ವಿಜಯಲಕ್ಷ್ಮಿ ಪಂಡಿತರು ಹೇಳಿದ್ದಾರೆ. ನವೆಂಬರ್ 14 ನಮ್ಮ ದೇಶದ ಒಬ್ಬ ಮಹಾಪುರುಷರಾದ ಪಂಡಿತ ಜವಾಹರ್‌ಲಾಲ್ ನೆಹರು ಅವರ ಜನ್ಮದಿನ. ಅಂದು ಭಾರತದಲ್ಲೆಲ್ಲ ‘ಮಕ್ಕಳ ದಿನ’ ಎಂದು ಸಂಭ್ರಮದಿಂದ ಪ್ರತಿವರುಷ ಆಚರಿಸುತ್ತೇವೆ. ಜವಾಹರರನ್ನು ಮಕ್ಕಳು ‘ಚಾಚಾ ನೆಹರೂ’ ಎಂದು ಪ್ರೀತಿ-ಗೌರವಗಳಿಂದ ಕರೆಯುತ್ತಾರೆ. ಚಾಚಾ ಎಂದರೆ ಚಿಕ್ಕಪ್ಪ.

ನೆಹರು ಅವರ ಪೂರ್ವಜರ ಹೆಸರು ‘ನೆಹರು’ ಆಗಿದ್ದಿರಲಿಲ್ಲ. ಅವರ ಪೂರ್ವಜರು ಕಾಶ್ಮೀರದಲ್ಲಿದ್ದರು. ಅವರಿಗೆ ‘ರಾಜಕೌಲ’ ಎಂಬ ಹೆಸರಿತ್ತು. ಪಂಡಿತ ರಾಜಕೌಲರು ಸಂಸ್ಕೃತ-ಫಾರಸೀ ಭಾಷೆಗಳಲ್ಲಿ ವಿದ್ವಾಂಸರಾಗಿದ್ದರು. ಕ್ರಿ.ಶ. 1716ರಲ್ಲಿ ದಿಲ್ಲಿಯ ಮೊಗಲದೊರೆ ಫರುಕ್ಸಿಯರನು ಕಾಶ್ಮೀರಕ್ಕೆ ಭೆಟ್ಟಿ ಕೊಟ್ಟಾಗ ಪಂಡಿತ ರಾಜಕೌಲರನ್ನು ದಿಲ್ಲಿಗೆ ಕರೆತಂದು ನಗರದ ನಡುವೆ ಹರಿಯುತ್ತಿದ್ದ ಕಾಲುವೆಯ ಪಕ್ಕದಲ್ಲಿ ಮನೆ ಕಟ್ಟಿಸಿಕೊಟ್ಟನು. ಕಾಲುವೆಗೆ ಹಿಂದಿ ಭಾಷೆಯಲ್ಲಿ ‘ನಹರ್’ ಎನ್ನುತ್ತಾರೆ. ಹೀಗಾಗಿ ‘ನಹರ್’ ಪಕ್ಕದ ಮನೆಯವರು ‘ನೆಹರೂ’ ಆದರು.

ಬಾಲ್ಯ–ವಿದ್ಯಾಭ್ಯಾಸ

ಮೋತೀಲಾಲರು ಕಲಿತು ದೊಡ್ಡವರಾಗಿ ಅಲಹಾಬಾದಿನಲ್ಲಿ ವಕೀಲಿ ವೃತ್ತಿ ಪ್ರಾರಂಭಿಸಿ ಅಪಾರ ಕೀರ್ತಿ ಮತ್ತು ಹಣ ಗಳಿಸಿದರು. ಜವಾಹರರು ಹುಟ್ಟಿದ್ದು 1889ನೇ ನವಂಬರ 14 ರಂದು. ತಾಯಿ ಸ್ವರೂಪರಾಣಿ. ವೈಭವದ ಜೀವನ ಶ್ರೀಮಂತ ತಂದೆಯ ಒಬ್ಬನೇ ಮಗನಾದ ಜವಾಹರರು ರಾಜಕುಮಾರನಂತೆ ಅತ್ಯಂತ ಸುಖದಿಂದ ಬೆಳೆದರು. ಮೋತೀಲಾಲರು ಹೊಸದಾಗಿ ಕಟ್ಟಿಸಿದ ‘ಆನಂದಭವನ’ ವೆಂಬ ಹೆಸರಿನ ಮನೆಯು ಅರಮನೆಯಂತೆಯೇ ಇತ್ತು.

ಮೋತೀಲಾಲರು ಸಿಟ್ಟಿನ ಸ್ವಭಾವದವರು. ಜವಾಹರರಿಗೆ ಅವರ ಬಗ್ಗೆ ಹೆದರಿಕೆಯಿತ್ತು. ಒಮ್ಮೆ ಜವಾಹರರು ಚೆನ್ನಾಗಿ ಪೆಟ್ಟು ತಿಂದರು. ಆದದ್ದು ಇಷ್ಟೇ. ಮೋತೀಲಾಲರ ಕೋಣೆಯಲ್ಲಿ ಮೇಜಿನ ಮೇಲೆ ಎರಡು ಪೆನ್ನುಗಳಿದ್ದವು. ಅವನ್ನು ನೋಡಿದಾಗ ಬಾಲಕ ಜವಾಹರರು ‘‘ಎರಡು ಪೆನ್ನುಗಳಿಂದ ಯಾರಾದರೂ ಬರೆಯುತ್ತಾರೆಯೇ, ಒಂದನ್ನು ನಾನು ಇಟ್ಟುಕೊಂಡರೆ ತಪ್ಪೇನು?’’ ಎಂದು ಆಲೋಚಿಸಿ ಒಂದನ್ನು ತೆಗೆದುಕೊಂಡರು. ಆ ಬಳಿಕ ತಂದೆ ಪೆನ್ನು ಕಾಣದೆ ಎಲ್ಲರನ್ನು ಕೇಳಿದರು. ಮಗನನ್ನು ಕೇಳಿದಾಗ ತಾನು ತೆಗೆದುಕೊಂಡಿಲ್ಲವೆಂದ. ಆದರೆ ಹುಡುಕಿದಾಗ ಮಗನ ಬಳಿ ಸಿಕ್ಕಿಬಿಟ್ಟಿತು. ಮಗನಿಗೆ ಚೆನ್ನಾಗಿ ಏಟುಬಿದ್ದವು!

ಹೀಗೆ ಸಿಟ್ಟಿನ ಸ್ವಭಾವವಿದ್ದರೂ ತಂದೆಗೆ ಮಗನ ಮೇಲೆ ಬಹಳ ಪ್ರೇಮವಿತ್ತು. ಮಗನಿಗೆ ಒಳ್ಳೆ ಶಿಕ್ಷಣ ಕೊಡಿಸಬೇಕೆಂದು ಮನೆಯಲ್ಲಿಯೇ ಉತ್ತಮ ಶಿಕ್ಷಕರನ್ನಿಟ್ಟರು. ಆಗಿನ ಕಾಲದ ವಿದ್ಯಾವಂತರಂತೆ ಮೋತೀಲಾಲರಿಗೂ ಇಂಗ್ಲಿಷ್ ಭಾಷೆಯ ಬಗ್ಗೆ ಬಹಳ ಮೋಹವಿತ್ತು. ಅದಕ್ಕಾಗಿ ಮಗನಿಗೆ ಇಂಗ್ಲಿಷ್ ಶಿಕ್ಷಣ ಕೊಡಿಸಲು ಫರ್ಡಿನೆಂಡ್ ಬ್ರುಕ್ಸ್ ಎಂಬುವನನ್ನು ನೇಮಿಸಿದ್ದರು. ಆತನು ಜವಾಹರರಲ್ಲಿ ಒಳ್ಳೊಳ್ಳೆಯ ಪುಸ್ತಕ ಓದುವ ರುಚಿ ಹುಟ್ಟಿಸಿದ. ಈ ರುಚಿಯು ಜವಾಹರರಿಗೆ ವಿದ್ಯಾರ್ಥಿಯಾಗಿದ್ದಾಗ ಮತ್ತು ಮುಂದೆಯೂ ಬಹಳ ಸಹಾಯಕವಾಯಿತು. ಚಿಕ್ಕಂದಿನಲ್ಲಿ ಜವಾಹರರೊಡನೆ ಆಟವಾಡಲು ‘ಆನಂದಭವನ’ ದಲ್ಲಿ ಸಣ್ಣ ಹುಡುಗರು ಇರಲಿಲ್ಲ. ಅವರ ತಂಗಿ ಸ್ವರೂಪಕುಮಾರಿ-ಮುಂದೆ ಶ್ರೀಮತಿ ವಿಜಯಲಕ್ಷಿ ಪಂಡಿತ್ ಎಂದು ಹೆಸರಾದರು – ಹುಟ್ಟದ್ದು 1900ರ ಆಗಸ್ಟ್ 18 ರಂದು. ಕಿರಿಯ ತಂಗಿ ಕೃಷ್ಣಾ-ಮುಂದೆ ಶ್ರೀಮತಿ ಕಷ್ಣಾ ಹಥೀಸಿಂಗ-ಹುಟ್ಟಿದ್ದು ೧೯೦೭ ರ ನವಂಬರ್ 2ರಂದು. ಆದರೆ ಜವಾಹರರಿಗೆ ಅವರ ಕಕ್ಕಿ ರಾಮಾಯಣ-ಮಹಾಭಾರತಗಳ ಕಥೆಗಳನ್ನೂ, 1857ರ ಸ್ವಾತಂತ್ರ ಸಮರದಲ್ಲಿ ಹೋರಾಡಿದ ದೇಶಭಕ್ತ ವೀರರ ಕಥೆಗಳನ್ನೂ ಹೇಳುತ್ತಿದ್ದರು. ಇದರಿಂದ ಜವಾಹರರಿಗೆ ನಮ್ಮ ದೇಶದ ಹಿರಿಮೆ ತಿಳಿಯುತ್ತಿತ್ತು. ನಮ್ಮ ದೇಶವನ್ನು ಆಳುತ್ತಿದ್ದ ಬ್ರಿಟಿಷರು ನಡೆಸುವ ಅತ್ಯಾಚಾರಗಳ ಬಗ್ಗೆ ಹಿರಿಯರು ಮಾತನಾಡುವುದನ್ನು ಜವಾಹರರು ಬಹಳ ಕುತೂಹಲದಿಂದ ಕೇಳುತ್ತಿದ್ದರು. ಭಾರತೀಯರಿಗೆ ಎಲ್ಲಿಯೂ ಗೌರವದ ಸ್ಥಾನ-ಮಾನವಿರಲಿಲ್ಲ. ಉಪಾಹಾರ ಗೃಹಗಳಲ್ಲಿ, ರೈಲುಡಬ್ಬಿಗಳಲ್ಲಿ, ಸಾರ್ವಜನಿಕ ಉದ್ಯಾನಗಳಲ್ಲಿ- ಹೀಗೆ ಎಲ್ಲ ಕಡೆ ಬ್ರಿಟಿಷರಿಗೆ ಪ್ರತ್ಯೇಕ ಆಸನ ವ್ಯವಸ್ಥೆಯಿರುತ್ತಿತ್ತು. ಬ್ರಿಟಿಷರು ಭಾರತೀಯರನ್ನು ಬಹಳ ಕೀಳುಭಾವನೆಯಿಂದ ಕಾಣುತ್ತಿದ್ದರು. ಇದೆಲ್ಲ ಕೇಳಿದಾಗ ಬಾಲಕ ಜವಾಹರರಿಗೆ ಬ್ರಿಟಿಷರ ಮೇಲೆ ಸಿಟ್ಟು ಬರುತ್ತಿತ್ತು.

ಇಂಗ್ಲೆಂಡಿನಲ್ಲಿ

ಜವಾಹರರಿಗೆ 15 ವರುಷ ದಾಟಿದಾಗ ಮೋತಿಲಾಲರು ಅವರನ್ನು ಇಂಗ್ಲೆಂಡಿನಲ್ಲಿ ‘ಹ್ಯಾರೋ’ ಎಂಬ ಸಾರ್ವಜನಿಕ ಶಾಲೆಗೆ ಸೇರಿಸಿದರು. ಅಲ್ಲಿ ಜವಾಹರರು ಬೀಜಗಣಿತ, ರೇಖಾಗಣಿತ, ಇತಿಹಾಸ, ಸಾಹಿತ್ಯ ಮುಂತಾದ ಎಲ್ಲ ವಿಷಯಗಳಲ್ಲಿ ಉತ್ತಮ ವಿದ್ಯಾರ್ಥಿಯೆಂದು ಹೆಸರು ಪಡೆದು ಬಹುಮಾನ ಗಳಿಸಿದರು. ಜವಾಹರರು ಇಂಗ್ಲೆಂಡಿಗೆ ಹೋದರೂ ಭಾರತದಲ್ಲಿ ನಡೆಯುತ್ತಿದ್ದ ಸಂಗತಿಗಳನ್ನು ತಿಳಿಯಲು ಉತ್ಸುಕರಾಗಿದ್ದರು ಮತ್ತು ಒಳ್ಳೊಳ್ಳೆಯ ಭಾರತೀಯ ಪತ್ರಿಕೆಗಳನ್ನು ತರಿಸಿಕೊಂಡು ಓದುತ್ತಿದ್ದರು.

1912 ರ ಆಗಸ್ಟ್ ತಿಂಗಳಲ್ಲಿ ಭಾರತಕ್ಕೆ ಮರಳಿದ ಬಳಿಕ ಜವಾಹರರು ತಂದೆಯವರೊಡನೆ ವಕೀಲಿವೃತ್ತಿ ಪ್ರಾರಂಭಿಸಿದರು. ಅವರು ತೆಗೆದುಕೊಂಡ ಮೊದಲನೆಯ ಪ್ರಕರಣದಿಂದ ಅವರಿಗೆ ೫೦೦ ರೂಪಾಯಿ ಶುಲ್ಕ ಬಂದಿತು. 1916 ರ ಫೆಬ್ರವರಿ 8 ರ ವಸಂತಪಂಚಮಿಯ ದಿನ ದಿಲ್ಲಿಯಲ್ಲಿ ಜವಾಹರರ ಮದುವೆ ಬಹಳ ವೈಭವದಿಂದ ನೆರವೇರಿತು. ಅವರ ಪತ್ನಿ ಕಮಲಾ. ಆಕೆಯೂ ಸಹ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಕೀರ್ತಿ ಗಳಿಸಿದರು. ಜವಾಹರರಿಗೆ ಒಬ್ಬಳೇ ಮಗಳು, ಇಂದಿರಾ ಪ್ರಿಯದರ್ಶಿನಿ.

ಜವಾಹರರ ಜೀವನ ನಾಡಿನ ಸ್ವಾತಂತ್ರ ದ ಹೋರಾಟದ ಒಂದು ಭಾಗವಾಗಿ ಹೋಯಿತು. ದೇಶದ ಸ್ವಾತಂತ್ರ ಕ್ಕಾಗಿ ಹೋರಾಟ ನಡೆದಾಗ ಅವರು ನಾಲ್ಕು ಬಾರಿ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಗೊಂಡರು. ಅವರ ಇಡೀ ಜೀವನ ದೇಶಕ್ಕಾಗಿ ಸಮರ್ಪಿತವಾಗಿತ್ತು. ಅವರು ಸರ್ವಶಕ್ತಿಯಿಂದ ಸದಾಕಾಲವೂ ದೇಶಕ್ಕಾಗಿ ದುಡಿಯುತ್ತ ಮುಂದೆ ಮುಂದೆ ಸಾಗಿದರು. ಸೆರೆಮನೆಯಲ್ಲೇ ಇರಲಿ, ಹೊರಗೇ ಇರಲಿ, ಜವಾಹರರು ಯಾವಾಗಲೂ ದೇಶದ ಸ್ವಾತಂತ್ರ , ದೇಶದ ಉನ್ನತಿ, ದೇಶದ ಪ್ರಗತಿ ಇವುಗಳ ಚಿಂತೆಯನ್ನೇ ಮಾಡುತ್ತಿದ್ದರು.

ಭಾರತದ ಪ್ರಧಾನಿ

ಸ್ವತಂತ್ರ ಭಾರತಕ್ಕೆ ಜವಾಹರಲಾಲ್ ನೆಹರೂ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಸ್ವತಂತ್ರಭಾರತದ ಮೊದಲನೆಯ ಪ್ರಧಾನಮಂತ್ರಿಯಾಗಿ ದೇಶದ ಪ್ರಗತಿ ಸಾಧಿಸುವ ಪೂರ್ಣ ಹೊಣೆ ಹೊರಬೇಕಾಯಿತು. ಹದಿನೇಳು ವರ್ಷಕಾಲ ಅವರು ಸ್ವತಂತ್ರ ಭಾರತದ ಪ್ರಧಾನಿಯಾಗಿದ್ದರು. ಈ ಕಾಲದಲ್ಲಿ ಅವರು ನಮ್ಮ ದೇಶದ ಉನ್ನತಿಗಾಗಿಯಷ್ಟೇ ಅಲ್ಲ, ಇಡೀ ಜಗತ್ತಿನಲ್ಲಿ ಶಾಂತಿ ಸ್ಥಾಪಿಸಲು ಹೆಣಗಾಡಿದರು.

‘ಭಾರತ ರತ್ನ’

1955ರಲ್ಲಿ ದೇಶದ ಜನತೆಯ ಪರವಾಗಿ ರಾಷ್ಟ್ರಪತಿಯವರು ಜವಾಹರರಿಗೆ ‘ಭಾರತರತ್ನ’ ಪದವಿ ನೀಡಿ ಗೌರವಿಸಿದರು.

ನಮ್ಮ ದೇಶದ ಉನ್ನತಿಗಾಗಿ ಚಾಚಾ ನೆಹರೂ ಕೊಟ್ಟ ಮಂತ್ರವೆಂದರೆ ‘‘ಆರಾಮ್ ಹರಾಮ್ ಹೈ.’’ ನಾವು ಎಂದಿಗೂ ಸೋಮಾರಿಗಳಾಗಬಾರದೆಂಬುದೇ ಆ ಮಂತ್ರದ ಅರ್ಥ.

ಸಾಹಿತಿ ನೆಹರು

ಜವಾಹರರು ಸಾಹಿತಿಗಳೂ ಆಗಿದ್ದರು. ಚಿಕ್ಕಂದಿನಿಂದಲೂ ಅವರಿಗೆ ಪುಸ್ತಕಗಳನ್ನು ಓದುವುದೆಂದರೆ ಬಹು ಆಸಕ್ತಿ. ದಿನವಿಡೀ ಬೇರೆ ಬೇರೆ ಕೆಲಸಗಳಿಂದ ದಣಿವಾದರೂ ಅವರು ರಾತ್ರಿ ಮಲಗುವ ಮುಂಚೆ ಸ್ವಲ್ಪ ಸಮಯ ಉತ್ತಮ ಪುಸ್ತಕ ಓದುತ್ತಿದ್ದರು. ಅವರಿಂದ ಇಂಗ್ಲಿಷ್ ಭಾಷೆಯಲ್ಲಿ ರಚಿತವಾದ ಮೂರು ಪುಸ್ತಕಗಳು ಜಗತ್ಪ್ರಸಿದ್ಧವಾಗಿವೆ. ಸಹಜವಾಗಿ ಅನುಕಂಪ ತೋರುವ ಹೃದಯ, ಯಾವ ಸಮಸ್ಯೆಯನ್ನೂ ವಿಶಾಲವಾದ ದೃಷ್ಟಿಯಿಂದ ಕಾಣುವ ವಿವೇಕ ಅವರ ಎಲ್ಲ ಪುಸ್ತಕಗಳಲ್ಲಿ ಕಾಣುತ್ತವೆ.

ದೀಪ ಆರಿತು

1964ರ ಮೇ 27
ರಂದು ನೆಹರು ನಿಧನರಾದರು. ಎಲ್ಲ ದೇಶಗಳ ಪ್ರಮುಖರು ಅಂತಿಮಯಾತ್ರೆಯಲ್ಲಿ ಭಾಗವಹಿಸಿ ತಮ್ಮ ಗೌರವ ಸಲ್ಲಿಸಿದರು.

ಅಪೂರ್ವ ದೇಶಭಕ್ತರು ಅಪೂರ್ವ ವ್ಯಕ್ತಿ

ಭಾರತ ಯುಗಧರ್ಮಕ್ಕೆ ಅನುಗುಣವಾಗಿ ಬದಲಾಗಬೇಕು, ತನ್ನ ಚಿಂತನೆ-ಸಂಸ್ಕೃತಿಗಳಲ್ಲಿ ಸತ್ವವಿರುವುದನ್ನು ಉಳಿಸಿಕೊಳ್ಳಬೇಕು, ಆದರೆ ಹೊಸ ಜ್ಞಾನ ಹೊಸ ಚಿಂತನೆಗಳಿಗೆ ಮನಸ್ಸನ್ನು ತೆರೆದಿರಬೇಕು ಎಂದು ನೆಹರೂ ಅವರು ಸಾರಿದರು. ಒಟ್ಟಿನಲ್ಲಿ ಅವರು ಅಪೂರ್ವ ದೇಶಭಕ್ತರು. ಅಪೂರ್ವ ಸ್ನೇಹಪರರಾದ, ಹೃದಯವಂತಿಕೆಯ ವ್ಯಕ್ತಿ.

ಕೃಪ

ವಿಶ್ವ ಮಕ್ಕಳ ದಿನಾಚರಣೆ

 





ವಿಶ್ವ ಮಕ್ಕಳ ದಿನಾಚರಣೆ

20 ನೆ ನವಂಬರ್ ವಿಶ್ವ ಮಕ್ಕಳ ದಿನಾಚರಣೆ . 14 ನೆ ನವಂಬರ್ ಭಾರತದಲ್ಲಿ ಮಕ್ಕಳ ದಿನಾಚರಣೆ
ಪ್ರಪಂಚದಲ್ಲಿ ನವೆಂಬರ್ 20 ರಂದು ಮಕ್ಕಳ ದಿನಾಚರಣೆಯನ್ನು ಪ್ರತಿವರ್ಷ ಆಚರಿಸುವರು. ಈ ದಿನವನ್ನು ಮಕ್ಕಳ ಬಾಲ್ಯವನ್ನು ಸಂಭ್ರಮದಿಂದ ಕಾಣಲು ಆಚರಿಸಲಾಗುವುದು. ಈ ದಿನವನ್ನು ಬಾಲ್ಯದ ಹೆಸರಿನಲ್ಲಿ ಆಚರಿಸಲಾಗುವುದು.
ಮಕ್ಕಳ ದಿನವನ್ನು 1959 ಕ್ಕೆ ಮೊದಲು ಜಗತ್ತಿನಾದ್ಯಂತ ಅಕ್ಟೋಬರ್ ತಿಂಗಳಲ್ಲಿ ಆಚರಿಸುತ್ತಿದ್ದರು. ಈ ದಿನ ವನ್ನು ವಿಶ್ವ ಸಂಸ್ಥೆಯ ಸಾಮಾನ್ಯಸಭೆಯು ತೀರ್ಮಾನಿಸಿದಂತೆ ಪ್ರಥಮ ಬಾರಿಗೆ 1954 ರಲ್ಲಿ ಆಚರಿಸಲಾಯಿತು. ಇದನ್ನು ಮೂಲಭೂತ ಉದ್ಧೇಶ ಸಮುದಾಯದ ವಿನಿಮಯದ ಹೆಚ್ಚಳ ಮತ್ತು ಮಕ್ಕಳ ತಿಳುವಳಿಕೆ ಜಾಸ್ತಿ ಮಾಡುವುದು, ಅಲ್ಲದೆ ಮಕ್ಕಳಿಗೆ ಅನುಕೂಲವಾದ ಕಲ್ಯಾಣ ಕಾರ್ಯಕ್ರಮಗಳನ್ನು ಉತ್ತೇಜಿಸಲು ಜಗತ್ತಿನಾದ್ಯಂತ ಆಚರಣೆಯನ್ನು ಪ್ರಾರಂಭಿಸಲಾಯಿತು.

ನವೆಂಬರ್ 20ನ್ನು ವಿಶ್ವ ಮಕ್ಕಳ ದಿನವಾಗಿ ಆರಿಸಲು ಕಾರಣ, ಅದು ವಿಶ್ವ ಸಂಸ್ಥೆಯು ಸಾಮಾನ್ಯ ಸಭೆಯು ಮಕ್ಕಳ ಹಕ್ಕುಗಳ ಘೋಷಣೆಯನ್ನು 1959ರಲ್ಲಿ, ಅಂಗೀಕರಿಸಿದ ದಿನ. ಮಕ್ಕಳ ಹಕ್ಕುಗಳ ಸಮಾವೇಶವು
1989 ರಲ್ಲಿ ಅದಕ್ಕೆ ಸಹಿ ಮಾಡಿತು. ಆಗಿನಿಂದ 191 ದೇಶಗಳು ಇದನ್ನು ಒಪ್ಪಿವೆ.

ಮಕ್ಕಳದಿನಾಚರಣೆಯನ್ನು ವಿಶ್ವಾದ್ಯಂತ 1953, ಅಕ್ಟೋಬರನಲ್ಲಿ ಆಚರಿಸಲಾಯಿತು. ಇದನ್ನು ಜಿನೆವಾದಲ್ಲಿನ ಅಂತರಾಷ್ಟ್ರೀಯ ಮಕ್ಕಳ ಕಲ್ಯಾಣ ಸಮಿತಿಯು ಪ್ರಾಯೋಜಿಸಿತು. ಅಂತರಾಷ್ಟ್ರೀಯ ಮಕ್ಕಳ ದಿನದ ಯೋಜನೆಯು ಶ್ರೀ. ಕೃಷ್ಣ ಮೆನೆನ್ ಅವರಿಂದ ಸೂಚಿಸಿದರು. 1954 ರಲ್ಲಿ ವಿಶ್ವಸಂಸ್ಥೆ ಸಾಮಾನ್ಯ ಸಭೆಯು ಅದನ್ನು ಅನುಮೋದಿಸಿತು. ನವಂಬರ್ 20 ವಿಶ್ವ ಮಕ್ಕಳ ದಿನ. ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯು 1954 ರಲ್ಲಿ ಮಕ್ಕಳ ದಿನಾಚರಣೆ ಮಾಡಲು ಘೋಷಣೆ ಮಾಡಿತು. ಪ್ರಪಂಚದ ಎಲ್ಲ ರಾಷ್ಟ್ರಗಳು ಅದನ್ನು ಆಚರಿಸಲು ಪ್ರೋತ್ಸಾಹಿಸಿತು. ಮಕ್ಕಳಲ್ಲಿ ಪರಸ್ಪರ ವಿನಮಯ ಮತ್ತು ಅರಿವು ಹೆಚ್ಚಿಸಲು, ಮತ್ತು ಮಕ್ಕಳ ಕಲ್ಯಾಣ ಕಾರ್ಯ ಕ್ರಮಗಳನ್ನು ಕೈಗೆತ್ತಿಕೊಳ್ಳಲು ಜಗತ್ತಿನಾದ್ಯಂತ ಕ್ರಮ ತೆಗೆದುಕೊಳ್ಳಲು ಸಾಧ್ಯವಾಯಿತು.
ಈಗಾಗಲೇ ತೀಳಿಸಿರುವಂತೆ ಭಾರತದಲ್ಲಿ ಮಕ್ಕಳ ದಿನಾಚರಣೆಯನ್ನು ಜವಹರಲಾಲ್ ನೆಹರು ಅವರ ಜನ್ಮದಿನವಾದ ನವಂಬರ ೧೪ ರಂದು ಆಚರಿಸಲಾಗುವುದು. ಅಂದು ಮಕ್ಕಳಿಗೆ ಖಷಿಯಿಂದ ಕುಣಿಯುವ ದಿನ, ಬಾಲ್ಯದ ಸೊಗಸು, ಬೆಡಗು , ಬೆರಗು ಮತ್ತು ನೆಹರು ಅವರ ಮಕ್ಕಳ ಮೇಲಿನ ಅಪಾರ ಅಕ್ಕರೆ ಪ್ರೀತಿಯನ್ನು ಸಂಭ್ರಮದಿಂದ ನೆನೆವ ದಿನ. ಭಾರತದಾದ್ಯಂತ “ಮಕ್ಕಳದಿನಾಚರಣೆ “ಯನ್ನು ಬಹು ಸಡಗರ ಮತ್ತು ಸಂಭ್ರಮದಿಂದ ಆಚರಿಸುವರು.
ಮಕ್ಕಳ ದಿನವನ್ನು ಅವರಿಗೆ ಜೀವನದ ಸುಖವನ್ನು ಸವಿಯುವ ಹಕ್ಕನ್ನು ಹೊಂದಲು, ದೇಶದ ಆರೋಗ್ಯವಂತ ಮತ್ತು ಪ್ರಜ್ಞಾವಂತ ನಾಗರೀಕರಾಗಿ ಬೆಳೆಯಲು ಅವಕಾಶ ನೀಡುವುದಕ್ಕಾಗಿ. ಆಚರಿಸಲಾಗುವುದು. ನಿಮ್ಮ ಮಕ್ಕಳಿಗೆ ಅದೃಷ್ಟವಶದಿಂದ ತನ್ನಲ್ಲಿರುವುದನ್ನು ಇಲ್ಲದೆ ಇರುವ ಇತರರೊಂದಿಗೆ ಹಂಚಿಕೊಳ್ಳುವುದರ ಮೌಲ್ಯವನ್ನು ತಿಳಿಸಿದರೆ, ಮಗುವು ಹೊಣೆಯರಿತ ಮಾನವನಾಗಿ ಬೆಳೆಯಲು ಅನುವಾಗುವುದು. ಇದರ ಜೊತೆ ಇನ್ನೊಂದು ಮಗುವು ನಿರ್ಲಕ್ಷತೆಯಿಂದ ಬಾಲಾಪರಾಧಿಯಾಗುವುದನ್ನೂ ತಪ್ಪಿಸಿದಂತಾಗುವುದು.ಇದಕ್ಕೆ ಕಾರಣ ನಿಮ್ಮ ಮುಂದಾಲೋಚನೆ ಎಂಬ ತೃಪ್ತಿಯಾಗುವುದು 

ತಿಳುವಳಿಕೆ ಜಾಸ್ತಿ ಮಾಡುವುದು, ಅಲ್ಲದೆ ಮಕ್ಕಳಿಗೆ ಅನುಕೂಲವಾದ ಕಲ್ಯಾಣ ಕಾರ್ಯಕ್ರಮಗಳನ್ನು ಉತ್ತೇಜಿಸಲು ಜಗತ್ತಿನಾದ್ಯಂತ ಆಚರಣೆಯನ್ನು ಪ್ರಾರಂಭಿಸಲಾಯಿತು.

ನವೆಂಬರ್ 20ನ್ನು ವಿಶ್ವ ಮಕ್ಕಳ ದಿನವಾಗಿ ಆರಿಸಲು ಕಾರಣ, ಅದು ವಿಶ್ವ ಸಂಸ್ಥೆಯು ಸಾಮಾನ್ಯ ಸಭೆಯು ಮಕ್ಕಳ ಹಕ್ಕುಗಳ ಘೋಷಣೆಯನ್ನು 1959ರಲ್ಲಿ, ಅಂಗೀಕರಿಸಿದ ದಿನ. ಮಕ್ಕಳ ಹಕ್ಕುಗಳ ಸಮಾವೇಶವು
1989 ರಲ್ಲಿ ಅದಕ್ಕೆ ಸಹಿ ಮಾಡಿತು. ಆಗಿನಿಂದ 191 ದೇಶಗಳು ಇದನ್ನು ಒಪ್ಪಿವೆ.

ಮಕ್ಕಳದಿನಾಚರಣೆಯನ್ನು ವಿಶ್ವಾದ್ಯಂತ 1953, ಅಕ್ಟೋಬರನಲ್ಲಿ ಆಚರಿಸಲಾಯಿತು. ಇದನ್ನು ಜಿನೆವಾದಲ್ಲಿನ ಅಂತರಾಷ್ಟ್ರೀಯ ಮಕ್ಕಳ ಕಲ್ಯಾಣ ಸಮಿತಿಯು ಪ್ರಾಯೋಜಿಸಿತು. ಅಂತರಾಷ್ಟ್ರೀಯ ಮಕ್ಕಳ ದಿನದ ಯೋಜನೆಯು ಶ್ರೀ. ಕೃಷ್ಣ ಮೆನೆನ್ ಅವರಿಂದ ಸೂಚಿಸಿದರು. 1954 ರಲ್ಲಿ ವಿಶ್ವಸಂಸ್ಥೆ ಸಾಮಾನ್ಯ ಸಭೆಯು ಅದನ್ನು ಅನುಮೋದಿಸಿತು. ನವಂಬರ್ 20 ವಿಶ್ವ ಮಕ್ಕಳ ದಿನ. ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯು 1954 ರಲ್ಲಿ ಮಕ್ಕಳ ದಿನಾಚರಣೆ ಮಾಡಲು ಘೋಷಣೆ ಮಾಡಿತು. ಪ್ರಪಂಚದ ಎಲ್ಲ ರಾಷ್ಟ್ರಗಳು ಅದನ್ನು ಆಚರಿಸಲು ಪ್ರೋತ್ಸಾಹಿಸಿತು. ಮಕ್ಕಳಲ್ಲಿ ಪರಸ್ಪರ ವಿನಮಯ ಮತ್ತು ಅರಿವು ಹೆಚ್ಚಿಸಲು, ಮತ್ತು ಮಕ್ಕಳ ಕಲ್ಯಾಣ ಕಾರ್ಯ ಕ್ರಮಗಳನ್ನು ಕೈಗೆತ್ತಿಕೊಳ್ಳಲು ಜಗತ್ತಿನಾದ್ಯಂತ ಕ್ರಮ ತೆಗೆದುಕೊಳ್ಳಲು ಸಾಧ್ಯವಾಯಿತು.
ಈಗಾಗಲೇ ತೀಳಿಸಿರುವಂತೆ ಭಾರತದಲ್ಲಿ ಮಕ್ಕಳ ದಿನಾಚರಣೆಯನ್ನು ಜವಹರಲಾಲ್ ನೆಹರು ಅವರ ಜನ್ಮದಿನವಾದ ನವಂಬರ ೧೪ ರಂದು ಆಚರಿಸಲಾಗುವುದು. ಅಂದು ಮಕ್ಕಳಿಗೆ ಖಷಿಯಿಂದ ಕುಣಿಯುವ ದಿನ, ಬಾಲ್ಯದ ಸೊಗಸು, ಬೆಡಗು , ಬೆರಗು ಮತ್ತು ನೆಹರು ಅವರ ಮಕ್ಕಳ ಮೇಲಿನ ಅಪಾರ ಅಕ್ಕರೆ ಪ್ರೀತಿಯನ್ನು ಸಂಭ್ರಮದಿಂದ ನೆನೆವ ದಿನ. ಭಾರತದಾದ್ಯಂತ “ಮಕ್ಕಳದಿನಾಚರಣೆ “ಯನ್ನು ಬಹು ಸಡಗರ ಮತ್ತು ಸಂಭ್ರಮದಿಂದ ಆಚರಿಸುವರು.
ಮಕ್ಕಳ ದಿನವನ್ನು ಅವರಿಗೆ ಜೀವನದ ಸುಖವನ್ನು ಸವಿಯುವ ಹಕ್ಕನ್ನು ಹೊಂದಲು,
ಮೂಲ: ವಿಕಾಸಪಿಡಿಯಾ

💐 *ನವೆಂಬರ್ 26 ಸಂವಿಧಾನ ದಿನಾಚರಣೆಯ ಮಾಹಿತಿ*💐🙏

 💐 *ನವೆಂಬರ್ 26 ಸಂವಿಧಾನ ದಿನಾಚರಣೆಯ ಮಾಹಿತಿ*💐🙏


*1949ರ ನವೆಂಬರ್ 26 ರಂದು ಬಾಬಾಸಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಸಮಿತಿ ಸದಸ್ಯರು ಭಾರತ ದೇಶಕ್ಕೆ ಸಮರ್ಪಿಸಿದ ಸಂವಿಧಾನವನ್ನು ಆಂಗೀಕರಿಸಲಾಯಿತು. ಇದು 1950ರ ಜನವರಿ 26ರಂದು ಅನುಷ್ಠಾನಕ್ಕೆ ತರಲಾಯಿತು. ಇದು ಭಾರತದ ಇತಿಹಾಸದಲ್ಲಿ ಹೊಸ ಶಖೆಯನ್ನು ಆರಂಭಿಸಿತ್ತು.*

👉 *ಭಾರತದ ಸಂವಿಧಾನ ಬಗ್ಗೆ:*
*ಭಾರತದಲ್ಲಿ ಸಂವಿಧಾನವನ್ನು 1949ರ ನವೆಂಬರ್ 26ರಂದು ಸ್ವೀಕರಿಸಲಾಯಿತು. ಇದು 1950ರ ಜನವರಿ 26ರಂದು ಅನುಷ್ಠಾನಕ್ಕೆ ಬಂತು.*
*ಭಾರತದ ಸಂವಿಧಾನವು ಟೈಪ್ ಮಾಡಿರುವುದಲ್ಲ ಅಥವಾ ಮುದ್ರಿತವೂ ಅಲ್ಲ. ಅದನ್ನು ಕೈಯಲ್ಲಿ ಬರೆಯಲಾಗಿದ್ದು, ಇಂಗ್ಲಿಷ್ ಮತ್ತು ಹಿಂದಿಯಲ್ಲಿದೆ. (ಕನ್ನಡ ಭಾಷೆಯಲ್ಲೂ ಓದಬಹುದು)*
*ಭಾರತ ಸಂವಿಧಾನದ ಮೂಲ ಪ್ರತಿಗಳನ್ನು ವಿಶೇಷ ಹೀಲಿಯಂ ತುಂಬಿದ ಕವಚಗಳಲ್ಲಿ ಸಂರಕ್ಷಿಸಲಾಗಿದ್ದು, ಇದು ಭಾರತದ ಸಂಸತ್ ಭವನದ ಗ್ರಂಥಾಲಯದಲ್ಲಿದೆ.*
*ಭಾರತ ಸಂವಿಧಾನವನ್ನು ಬೇರೆ ಕಡೆಗಳಿಂದ ಪಡೆದ ಅಂಶಗಳ ಚೀಲ ಎಂದು ಕರೆಯಲಾಗುತ್ತಿದೆ.*
*ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತದ ಪರಿಕಲ್ಪನೆಗಳನ್ನು ಫ್ರಾನ್ಸ್ ಸಂವಿಧಾನದಿಂದ ಪಡೆಯಲಾಗಿದೆ.*
*ಪಂಚವಾರ್ಷಿಕ ಯೋಜನೆಯ ಕಲ್ಪನೆಯನ್ನು ಸೋವಿಯತ್ ಒಕ್ಕೂಟದಿಂದ ಪಡೆಯಲಾಗಿದೆ.*
*ರಾಜ್ಯ ನಿರ್ದೇಶನ ತತ್ವಗಳು ಐರ್ಲೆಂಡ್ ಸಂವಿಧಾನದ ಕೊಡುಗೆ*
*ಸುಪ್ರೀಂಕೋರ್ಟ್ ಕಾರ್ಯನಿರ್ವಹಣೆಯ ಕಾನೂನನ್ನು ಜಪಾನ್ನಿಂದ ಎರವಲು ಪಡೆಯಲಾಗಿದೆ.*
*ಇದು ವಿಶ್ವದ ಯಾವುದೇ ಸ್ವತಂತ್ರ್ಯ ದೇಶಗಳ ಅತಿ ಉದ್ದವಾದ ಸಂವಿಧಾನವಾಗಿದೆ.*
*ಭಾರತದ ಸಂವಿಧಾನದಲ್ಲಿ 448 ವಿಧಿಗಳು, 25 ಭಾಗಗಳು, 12 ಶೆಡ್ಯೂಲ್, 5 ಅನುಬಂಧಗಳು, 98 ತಿದ್ದುಪಡಿಗಳಿವೆ.*
*ಸಂವಿಧಾನ ರಚನಾ ಸಮಿತಿಯಲ್ಲಿ 284 ಮಂದಿ ಸದಸ್ಯರಿದ್ದರು. ಅವರಲ್ಲಿ 15 ಮಂದಿ ಮಹಿಳೆಯರು.*
*ಇದರ ಕರಡನ್ನು 1949ರ ನವೆಂಬರ್ನಲ್ಲಿ ಸಲ್ಲಿಸಲಾಯಿತು. ಸಲ್ಲಿಕೆ ಬಳಿಕ ಅದನ್ನು ಪೂರ್ಣಗೊಳಿಸಲು ಮೂರು ವರ್ಷ ಬೇಕಾಯಿತು.*
*ಸಂವಿಧಾನ ರಚನಾ ಸಮಿತಿಯಲ್ಲಿದ್ದ ಎಲ್ಲ 284 ಮಂದಿ ಸದಸ್ಯರು 1950ರ ಜನವರಿ 24ರಂದು ಈ ದಾಖಲೆಗೆ ಸಹಿ ಮಾಡಿದರು.*
*1950ರ ಜನವರಿ 26ರಂದು ಇದು ಅಸ್ತಿತ್ವಕ್ಕೆ ಬಂತು.*
*ಭಾರತದ ರಾಷ್ಟ್ರಲಾಂಛನವನ್ನೂ ಅದೇ ದಿನ ಅಳವಡಿಸಿಕೊಳ್ಳಲಾಯಿತು.*
*ಭಾರತದ ಸಂವಿಧಾನವನ್ನು ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲೊಂದು ಎಂದು ಹೇಳಲಾಗಿದೆ. ಏಕೆಂದರೆ ಅದಕ್ಕೆ ಕೇವಲ 94 ತಿದ್ದುಪಡಿಗಳನ್ನು ತರಲಾಗಿದೆ.*

*ಸಂವಿಧಾನದ ಮಹತ್ವ/ಪ್ರಾಮುಖ್ಯತೆ*
*ಸಂವಿಧಾನವು ದೇಶದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಅದು ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳನ್ನು ಸರಕಾರದ ಮೂರು ಮುಖ್ಯ ಅಂಗಗಳಾಗಿ ಏರ್ಪಡಿಸುತ್ತದೆ. ಸಂವಿಧಾನವು ಪ್ರತಿ ಅಂಗದ ಅಧಿಕಾರದ ವ್ಯಾಖ್ಯೆಯನ್ನು ನೀಡುವದಲ್ಲದೆ ಅವುಗಳ ಜವಾಬ್ದಾರಿಯನ್ನೂ* *ಖಚಿತಗೊಳಿಸುತ್ತದೆ. ವಿಭಿನ್ನ ಅಂಗಗಳ ನಡುವಿನ ಸಂಬಂಧವನ್ನೂ ಜನತೆ ಹಾಗೂ ಸರಕಾರದ ನಡುವಿನ ಸಂಬಂಧವನ್ನೂ ನಿಯಂತ್ರಿಸುತ್ತದೆ.*
*ಸಂವಿಧಾನವು ದೇಶದ ಎಲ್ಲ ಕಾನೂನುಗಳಿಗಿಂತ ಹೆಚ್ಚಿನ ಸ್ಥಾನವನ್ನು ಹೊಂದಿದೆ. ಸರಕಾರವು ಮಾಡುವ ಪ್ರತಿಯೊಂದು ಕಾನೂನು ಸಂವಿಧಾನಕ್ಕೆ ಅನುಗುಣವಾಗಿರಬೇಕು. ಭಾರತದ ಸಂವಿಧಾನವು ದೇಶದ ಗುರಿಗಳು - ಪ್ರಜಾಪ್ರಭುತ್ವ, ಸಮಾಜವಾದ, ಜಾತ್ಯತೀತತೆ ಮತ್ತು ರಾಷ್ಟ್ರೀಯ ಸಮಗ್ರತೆ ಎಂದು ಸ್ಪಷ್ಟಪಡಿಸುತ್ತದೆ. ಅದು ಪ್ರಜೆಗಳ ಹಕ್ಕುಗಳನ್ನು ಮತ್ತುಕರ್ತವ್ಯಗಳನ್ನು ಖಚಿತವಾಗಿ ವಿಧಿಸುತ್ತದೆ*
*ಸಂಪುಟ ಸಮಿತಿ*
*ಎರಡನೆಯ ಮಹಾಯುದ್ಧವು ಮೇ ೯, ೧೯೪೫ರಂದು* *ಯೂರೋಪಿನಲ್ಲಿ ಮುಕ್ತಾಯಗೊಂಡಿತು.ಅದೇ ವರ್ಷದ ಜುಲೈನಲ್ಲಿ ಯುನೈಟೆಡ್ ಕಿಂಗ್ಡಮ್ನಲ್ಲಿ ಹೊಸ ಸರಕಾರವು ಅಧಿಕಾರಕ್ಕೆ ಬಂದಿತು. ಈ ಹೊಸ* *ಸರಕಾರವು ತನ್ನ ಭಾರತೀಯ ಧೋರಣೆ (ಇಂಡಿಯನ್ ಪಾಲಿಸಿ)ಯನ್ನು ಘೋಷಿಸಿ, ಸಂವಿಧಾನದ ಕರಡನ್ನು ತಯಾರು ಮಾಡಲು ಸಮಿತಿಯನ್ನು ರಚಿಸಲು ನಿರ್ಧರಿಸಿತು. ಮೂವರು ಬ್ರಿಟೀಷ್ ಮಂತ್ರಿಗಳ ತಂಡವೊಂದು, ಭಾರತದ ಸ್ವಾತಂತ್ರ್ಯದ ಬಗ್ಗೆ, ಪರಿಹಾರ ಹುಡುಕಲುಭಾರತಕ್ಕೆ ಬಂದಿತು. ಈ ತಂಡವನ್ನು 'ಸಂಪುಟ* *ಸಮಿತಿ' (Cabinet Mission) ಎಂದು ಕರೆಯಲಾಯಿತು.*
*ಸಂವಿಧಾನದ ರೂಪುರೇಷೆಗಳನ್ನು ಚರ್ಚಿಸಿದ ಈ ಸಮಿತಿಯು, ಕರಡು ಸಂವಿಧಾನ ರಚನಾ ಸಮಿತಿಯು ಅನುಸರಿಸಬೇಕಾದ ಕಾರ್ಯವಿಧಾನದ ಕೆಲವು ವಿವರಗಳನ್ನು ಸ್ಪಷ್ಟಪಡಿಸಿತು. ಬ್ರಿಟಿಷ್ ಭಾರತದ ಪ್ರಾಂತ್ಯಗಳ ೨೯೬ ಸ್ಥಾನಗಳಿಗೆ ಚುನಾವಣೆಗಳು ೧೯೪೬ರ ಜುಲೈ - ಅಗಸ್ಟ್ ಹೊತ್ತಿಗೆ ಮುಗಿದವು. ಆಗಸ್ಟ್ ೧೫, ೧೯೪೭ರಂದು ಭಾರತದ ಸ್ವಾತಂತ್ರ್ಯದೊಂದಿಗೆ ಸಂವಿಧಾನರಚನಾ ಸಮಿತಿಯು ಸಂಪೂರ್ಣವಾಗಿ ಸ್ವಾಯತ್ತ ಸಭೆಯಾಗಿ ಮಾರ್ಪಟ್ಟಿತು. ಈ ಸಮಿತಿಯುಡಿಸೆಂಬರ್ ೯, ೧೯೪೬ರಂದು ತನ್ನ ಕೆಲಸವನ್ನು ಆರಂಭಿಸಿತು.*
*ಸಂವಿಧಾನ ರಚನಾಸಭೆ: ಭಾರತದ ಜನತೆ ಪ್ರಾಂತೀಯ ಸಭೆಗಳ ಸದಸ್ಯರನ್ನು ಆರಿಸಿ, ಆ ಸಭೆಗಳು ಸಂವಿಧಾನರಚನಾ ಸಭೆಯ ಸದಸ್ಯರನ್ನು ಆರಿಸಿದರು.ಸಂವಿಧಾನ ರಚನಾಸಭೆಯಲ್ಲಿ ಭಾರತದ ವಿವಿಧ ಪ್ರದೇಶಗಳಿಗೆ ಹಾಗೂ ಸಮುದಾಯಗಳಿಗೆ ಸೇರಿದ ಸದಸ್ಯರು ಇದ್ದರು. ಬೇರೆ ಬೇರೆ ರಾಜಕೀಯ ವಿಚಾರಧಾರೆಗಳನ್ನು ಪ್ರತಿನಿಧಿಸುವ ಸದಸ್ಯರೂ ಅಲ್ಲಿ ಇದ್ದರು. ಜವಾಹರ್ಲಾಲ್ ನೆಹರೂ,ರಾಜೇಂದ್ರ ಪ್ರಸಾದ್, ಸರ್ದಾರ್ ಪಟೇಲ್, ಮೌಲಾನಾ ಅಬುಲ್ ಕಲಂ ಆಝಾದ್ ಮತ್ತು ಶ್ಯಾಮ್ ಪ್ರಸಾದ್ ಮುಖರ್ಜಿ ಇವರುಗಳು ಸಭೆಯ ಚರ್ಚೆಗಳಲ್ಲಿ ಭಾಗವಹಿಸಿದ ಕೆಲವು ಪ್ರಮುಖ ವ್ಯಕ್ತಿಗಳಾಗಿದ್ದರು. ಪರಿಶಿಷ್ಟ ವರ್ಗಗಳಿಗೆ ಸೇರಿದ ಮೂವತ್ತಕ್ಕೂ ಹೆಚ್ಚು ಸದಸ್ಯರಿದ್ದರು ಆಂಗ್ಲೋ-ಇಂಡಿಯನ್ ಸಮುದಾಯವನ್ನು ಫ್ರಾಂಕ್ ಆಂಟನಿ ಅವರೂ ಪಾರ್ಸಿ ಜನರನ್ನು ಎಚ್.ಪಿ. ಮೋದಿ ಅವರೂ ಪ್ರತಿನಿಧಿಸಿದ್ದರು. ಆಂಗ್ಲೊ-ಇಂಡಿಯನ್ನರ ಹೊರತಾದ ಎಲ್ಲ ಕ್ರೈಸ್ತರನ್ನು ಪ್ರತಿನಿಧಿಸಿದ ಖ್ಯಾತ ಕ್ರೈಸ್ತರಾದ ಹರೇಂದ್ರ ಕುಮಾರ್ ಮುಖರ್ಜಿಯವರು ಅಲ್ಪಸಂಖ್ಯಾತರ ಸಮಿತಿಯ ಅಧ್ಯಕ್ಷರಾಗಿ ಇದ್ದರು. ಸಂವಿಧಾನ ತಜ್ಞರಾದ ಅಲ್ಲಾಡಿ ಕೃಷ್ಣಸ್ವಾಮಿ, ಬಿ.ಆರ್.ಅಂಬೇಡ್ಕರ್ , ಬಿ.ಎನ್. ರಾಜು ಮತ್ತು ಕೆ.ಎಂ. ಮುನ್ಶಿಯವರೂ ಸಭೆಯ ಸದಸ್ಯರಾಗಿದ್ದರು. ಸರೋಜಿನಿ ನಾಯ್ಡು ಮತ್ತು ವಿಜಯಲಕ್ಷ್ಮಿ ಪಂಡಿತ್ ಪ್ರಮುಖ ಮಹಿಳಾ ಸದಸ್ಯರಾಗಿದ್ದರು. ಡಾ. ಸಚ್ಚಿದಾನಂದ ಸಿನ್ಹಾರವರು ಸಂವಿಧಾನರಚನಾಸಭೆಯ ತಾತ್ಕಲಿಕ ಅಧ್ಯಕ್ಷರಾಗಿದ್ದರು.* *ನಂತರ, ಡಾ.ರಾಜೇಂದ್ರ ಪ್ರಸಾದ್ಅವರು ಅಧ್ಯಕ್ಷರಾಗಿಯೂ ಬಿ.ಆರ್.ಅಂಬೇಡ್ಕರ್ ಅವರು ಕರಡು ಸಮಿತಿ ಅಧ್ಯಕ್ಷರಾಗಿಯೂ ಆಯ್ಕೆಯಾದರು.*
*ಸಂವಿಧಾನ ರಚನಾಸಭೆಯು ಎರಡು ವರ್ಷ ೧೧ ತಿಂಗಳು ೧೮ ದಿನಗಳ ಕಾಲದ ಅವಧಿಯಲ್ಲಿ ೧೬೬ ದಿನ ಸಮಾವೇಶಗೊಂಡಿತು. ಈ ಸಮಾವೇಶಗಳಿಗೆ ಸಾರ್ವಜನಿಕರಿಗೂ ಹಾಗು ಪತ್ರಕರ್ತರಿಗೂ ಪ್ರವೇಶವಿತ್ತು.*

👉 *ಆಶಯಗಳ ನಿಷ್ಕರ್ಷೆ(ಧೇಯಗಳ ನಿರ್ಣಯ)*
👉 *ಸಂವಿಧಾನದ ಮೂಲ ತತ್ವಗಳು:*
• *ಭಾರತವು ಸ್ವತಂತ್ರ, ಸಾರ್ವಭೌಮ, ಗಣರಾಜ್ಯ.*
• *ಭಾರತವು ಹಿಂದಿನ ಬ್ರಿಟಿಷ್ ಭಾರತದ ಪ್ರದೇಶಗಳು, ಭಾರತದ ರಾಜ್ಯಗಳು ಮತ್ತು ಭಾರತವನ್ನು ಸೇರಬಯಸುವ ಇತರ ಪ್ರದೇಶಗಳ ಒಕ್ಕೂಟ.*
• *ಒಕ್ಕೂಟವನ್ನು ಸೇರುವ ಪ್ರದೇಶಗಳು ಸ್ವಾಯತ್ತ ಘಟಕಗಳಾಗಿದ್ದು ಒಕ್ಕೂಟಕ್ಕೆ ಒಪ್ಪಿಸಿದ ಅಧಿಕಾರಗಳ ಹೊರತಾಗಿ ಸರಕಾರದ ಮತ್ತು ಆಡಳಿತದ ಎಲ್ಲ ಅಧಿಕಾರಗಳನ್ನು ಮತ್ತು ಕರ್ತವ್ಯಗಳನ್ನು ಚಲಾಯಿಸಬಲ್ಲವಾಗಿರುತ್ತವೆ*
• *ಸ್ವತಂತ್ರ ಸಾರ್ವಭೌಮ ಭಾರತದ ಮತ್ತು ಅದರ ಸಂವಿಧಾನದ ಎಲ್ಲಾ ಅಧಿಕಾರಗಳು ಮತ್ತು ಅಧಿಕರಣಗಳು ಭಾರತದ ಪ್ರಜೆಗಳಿಂದ ದೊರೆಯಲ್ಪಡುತ್ತವೆ*
• *ಭಾರತದ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ; ಕಾನೂನಿನ ಮುಂದೆ ಸಮಾನ ಸ್ಥಾನಮಾನ ಮತ್ತು ಅವಕಾಶಗಳು; ಮತ್ತು ಕಾನೂನು ಮತ್ತು ಸಾರ್ವಜನಿಕ ಸದಾಚಾರದ ಮಿತಿಗಳಲ್ಲಿನ ಮಾತು, ಅಭಿವ್ಯಕ್ತಿ, ನಂಬಿಕೆ, ಭಕ್ತಿ, ಆರಾಧನೆ, ಉದ್ಯೋಗ, ಸಂಗ-ಸಹವಾಸ ಮತ್ತು ಕೃತ್ಯಗಳ ಮೂಲಭೂತ ಹಕ್ಕುಗಳು ಆಶ್ವಾಸಿತವಾಗಿದೆ ಮತ್ತಿವುಗಳು ಒದಗಿಸಲ್ಪಡುತ್ತವೆ*
• *ಅಲ್ಪಸಂಖ್ಯಾತರಿಗೆ, ಹಿಂದುಳಿದ ಮತ್ತು ಆದಿವಾಸಿ ಪ್ರಾಂತ್ಯಗಳಿಗೆ, ದೀನ ಮತ್ತು ಹಿಂದುಳಿದ ವರ್ಗಗಳಿಗೆ ಸಮರ್ಪಕ ಸಂರಕ್ಷಣೆಗಳು ಒದಗಿಸಲಾಗುತ್ತದೆ*
• *ಭಾರತ ಗಣರಾಜ್ಯದ ಭೂಮಿ, ಸಾಗರ ಮತ್ತು ವಾಯು ಪರಿಮಿತಿಗಳ ಸಾರ್ವಭೌಮತೆಯನ್ನು ಎಲ್ಲಾ ನಾಗರೀಕ ದೇಶಗಳಂತೆ ನ್ಯಾಯವಾಗಿ ಮತ್ತು ಕಾನೂನಿಗನುಸಾರವಾಗಿ ಕಾಪಾಡಲ್ಪಡುತ್ತದೆ*
• *ಈ ದೇಶವು ಲೋಕಶಾಂತಿ ಮತ್ತು ಮನುಕುಲದ ಉದ್ಧಾರಕ್ಕೆ ತನ್ನ ಸಂಪೂರ್ಣ ಮತ್ತು ಮನಸಾರ ಪ್ರಯತ್ನವನ್ನು ಮಾಡುವುದು.*

👉 *ಪೀಠಿಕೆ*
*ಮುಖ್ಯ ಲೇಖನ: ಭಾರತ ಸಂವಿಧಾನದ ಪೀಠಿಕೆ*
*(ಪ್ರಸ್ತಾವನೆ)*
*ಭಾರತ ಧರ್ಮಲಿಂಗಂ ಎಂಬು*
*“ಭಾರತದ ಪ್ರಜೆಗಳಾದ ನಾವು, ಭಾರತವನ್ನು ಒಂದು ಸಾರ್ವಭೌಮ, ಸಮಾಜವಾದಿ, ಜಾತ್ಯಾತೀತ, ಪ್ರಜಾಸತ್ತಾತ್ಮಕ ಗಣತಂತ್ರವನ್ನಾಗಿ* *ವಿಧಿಯುಕ್ತವಾಗಿ ಸ್ಥಾಪಿಸಿ, ಅದರ ಎಲ್ಲಾ ಪ್ರಜೆಗಳಿಗೆ,*
*ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ;ವನ್ನು*
*ವಿಚಾರ, ಅಭಿವ್ಯಕ್ತಿ, ನಂಬಿಕೆ, ಭಕ್ತಿ ಮತ್ತು ಆರಾಧನೆಗಳಲ್ಲಿ ಸ್ವಾತಂತ್ರ್ಯ;ವನ್ನು*
*ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆ*
*ಗಳನ್ನು ದೊರಕಿಸಿ*
*ವೈಯಕ್ತಿಕ ಘನತೆ ಮತ್ತು ದೇಶದ ಒಗ್ಗಟ್ಟು ಮತ್ತು ಐಕ್ಯತೆಗೆ* *ಎಲ್ಲರಲ್ಲೂ ಭ್ರಾತೃತ್ವತೆ ಯನ್ನು* *ಪ್ರೋತ್ನಾಹಿಸಲು ನಿರ್ಧರಿಸಿ*
*ನಮ್ಮ ಸಂವಿಧಾನ ರಚನಾಸಭೆಯಲ್ಲಿ ಈ ೧೯೪೯ರ ನವೆಂಬರ್ ಮಾಹೆಯ ೨೬ನೇ ದಿನದಂದು, ನಾವಾಗಿ ನಾವೇ ಈ ಸಂವಿಧಾನವನ್ನು ಸ್ವೀಕರಿಸಿ, ಶಾಸನವನ್ನಾಗೆ* *ವಿಧಿಸಿಕೊಳ್ಳುತ್ತೇವೆ.*
*ಪೀಠಿಕೆಯು ಭಾರತದ ಸಂವಿಧಾನದ ಒಂದು ಅಂಗವಲ್ಲ; ಏಕೆಂದರೆ ಇದನ್ನು ನ್ಯಾಯಾಲಯದಲ್ಲಿ ಪ್ರಯೋಗಿಸಲು ಸಾಧ್ಯವಿಲ್ಲ. ಹಾಗಿದ್ದರೂ, ಸಂವಿಧಾನದಲ್ಲಿ ದ್ವಂದ್ವ ಇರುವಂತೆ ಕಂಡುಬರುವಲ್ಲಿ ಪೀಠಿಕೆಯನ್ನು ಉಪಯೋಗಿಸಿ ದ್ವಂದ್ವ* *ನಿವಾರಿಸಬಹುದಾದ ಕಾರಣ ಸರ್ವೋಚ್ಛ ನ್ಯಾಯಾಲಯವು ಪೀಠಿಕೆಯನ್ನು ಸಂವಿಧಾನದ ಒಂದು ಅಂಗವಾಗಿ ಪರಿಗಣಿಸಿದೆ. ಇದಕ್ಕೆ ಉದಾಹರಣೆ, 'ಕೇಶವಾನಂದ ಭಾರತಿ ಮತ್ತು ಕೇರಳ ಸರ್ಕಾರ' ಪ್ರಕರಣ. ಅದಾಗ್ಯೂ, ಪೀಠಿಕೆಯನ್ನು ಸಂವಿಧಾನದ ಲೇಖನದಲ್ಲಿ ದ್ವಂದ್ವ ಇದ್ದಾಗ ಮಾತ್ರ, ಮತ್ತಷ್ಟು ಅರ್ಥವತ್ತಾಗಿಸುವ ಸಾಧನವನ್ನಾಗಿ ಬಳಸಬಹುದೇ ಹೊರತು, ಹಕ್ಕು ಸಾಧಿಸುವ* *ಸಂವಿಧಾನದ ಒಂದು ಪ್ರತ್ಯೇಕ ವಿಭಾಗವೆಂದು ಪರಿಗಣಿಸಲಾಗದು.*
*ಪೀಠಿಕೆಯ ಮೂಲಪ್ರತಿಯಲ್ಲಿ "ಸಾರ್ವಭೌಮ ಪ್ರಜಾಪ್ರಭುತ್ವ ಗಣರಾಜ್ಯ" ಎಂದಿತ್ತು. ಎರಡು ಹೆಚ್ಚಿನ ಪದಗಳಾದ "ಸಮಾಜವಾದಿ" ಮತ್ತು "ಜಾತ್ಯಾತೀತ" ಪದಗಳನ್ನು ೧೯೭೬ರಲ್ಲಿಸಂವಿಧಾನದ ೪೨ನೆ ತಿದ್ದುಪಡಿಯಲ್ಲಿ ಸೇರಿಸಲಾಯಿತು. ಆ ಸಮಯದಲ್ಲಿ ತುರ್ತುಪರಿಸ್ಥಿತಿ ಜಾರಿಯಲ್ಲಿದ್ದಿದ್ದರಿಂದ, ಸಂವಿಧಾನಕ್ಕೆ ತಿದ್ದುಪಡಿ ತರಲು ಸಾಧ್ಯವೆ ಎಂಬುದನ್ನು ಹಿಂದಿನ ಅನುಭವದ ಆಧಾರದಲ್ಲಿ ಪರಿಶೀಲಿಸಿ, ಸರ್ದಾರ್ ಸ್ವರಣ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿನ ಸಮಿತಿಯು ಈ ತಿದ್ದುಪಡಿಯನ್ನು* *ಕಾರ್ಯಗತಗೊಳಿಸಬಹುದೆಂದು ಶಿಫಾರಸು ಮಾಡಿತು.
*
👉 *ಪೀಠಿಕೆಯ ಮಹತ್ವ*

*ಪೀಠಿಕೆಯಲ್ಲಿರುವ ಕೆಲವು ವಾಕ್ಯಗಳು, ಭಾರತದ ಸಂವಿಧಾನವು ರಚಿತವಾಗಿರುವ ಕೆಲವು ಮೂಲಭೂತ ಮೌಲ್ಯಗಳು ಮತ್ತು ಸಾತ್ವಿಕ ಸೂಚಿಗಳನ್ನು ಎತ್ತಿ ತೋರಿಸುತ್ತದೆ. ಈ ಪೀಠಿಕೆಯು ನಮ್ಮ ಸಂವಿಧಾನದ ದಿಕ್ಸೂಚಿಯಂತೆ ಕೆಲಸ ಮಾಡುತ್ತದೆ ಮತ್ತು ನ್ಯಾಯಾಧೀಶರು ಸಂವಿಧಾನವನ್ನು ಇದೇ ದಾರಿಯಲ್ಲಿ ವ್ಯಾಖ್ಯಾನಿಸಿ ಮುನ್ನಡೆಸುತ್ತಾರೆ. ಭಾರತದ ಸಂವಿಧಾನದ ಪೀಠಿಕೆಯಲ್ಲಿ ವ್ಯಕ್ತಪಡಿಸಿರುವ ಹಾಗು ತಿದ್ದುಪಡಿ ಮಾಡಲು* *ಸಾದ್ಯವಿಲ್ಲದ ಆಶಯಗಳನ್ನು ಬಹಳಷ್ಟು ಸಂದರ್ಭಗಳಲ್ಲಿ ಭಾರತದ ಸರ್ವೋಚ್ಛ ನ್ಯಾಯಾಲಯ ಎತ್ತಿ ಹಿಡಿದಿದೆ. ಪೀಠಿಕೆಯು ಸಂವಿಧಾನದ ಒಂದು ಭಾಗವಾದರೂ ಅದನ್ನು ಅಥವಾ ಅದರ ಯಾವುದೇ ಅಂಶವನ್ನು ಕಾನೂನಿಗನುಸಾರವಾಗಿ ಜಾರಿ(ಹೇರು) ಮಾಡುವಂತಿಲ್ಲ.
ಪೀಠಿಕೆಯ ಮೊದಲ ಪದಗಳು - "ನಾವು, ಜನರು " - ಭಾರತದಲ್ಲಿ ಅಧಿಕಾರ ಜನಗಳ ಕೈನಲ್ಲಿದೆ ಎಂಬ ಅಂಶದ ಪ್ರಾಮುಖ್ಯತೆಯನ್ನು ಹೇಳುತ್ತದೆ. ಪೀಠಿಕೆಯು, ಭಾರತದ ಪ್ರತಿಯೂಬ್ಬ ನಾಗರೀಕ ಹಾಗು ಸರ್ಕಾರ ಅನುಸರಿಸಬೇಕಾದ ಮತ್ತು ಸಾಧಿಸಬೇಕಾದ ಬಹು ಮುಖ್ಯ ರಾಷ್ಟ್ರೀಯ ಧ್ಯೇಯಗಳನ್ನು ಬಿಡಿಸಿ ಹೇಳುತ್ತದೆ. ಅವುಗಳೆಂದರೆ ಸಮಾಜವಾದ, ಜಾತಿ ನಿರಪೇಕ್ಷತೆ ಮತ್ತು ರಾಷ್ಟ್ರೀಯ ಭಾವೈಕ್ಯತೆ. ಕೊನೆಯದಾಗಿ ಅದರಲ್ಲಿ ಸಂವಿಧಾನವನ್ನು ಅಂಗೀಕರಿಸಿದ ದಿನಾಂಕ -ನವೆಂಬರ್ ೨೬ ೧೯೪೯ ಎಂದು ಹೇಳುತ್ತದೆ.
ಪೀಠಿಕೆಯ ಕೆಲವು ಪದಗಳ ನಿರೂಪಣೆ
ಸಾರ್ವಭೌಮ
ಸಾರ್ವಭೌಮ ಎಂಬ ಪದದ ಅರ್ಥ ಪರಮಾಧಿಕಾರ ಅಥಾವ ಸ್ವತಂತ್ರ ಎಂದು. ಭಾರತವು ಆಂತರಿಕವಾಗಿ ಹಾಗೂ ಬಾಹ್ಯವಾಗಿ ಸಾರ್ವಭೌಮ. ಬಾಹ್ಯವಾಗಿ ಯಾವುದೇ ವಿದೇಶೀ ಶಕ್ತಿಯ ಅಧೀನದಲ್ಲಿ ಭಾರತ ಇಲ್ಲ ಹಾಗೂ ಆಂತರಿಕವಾಗಿ ಒಂದು ಮುಕ್ತ, ಜನರಿಂದ ಆರಿಸಲ್ಪಟ್ಟ ಸರಕಾರ ಕಾನೂನು ಸುವ್ಯವಸ್ಥೆ ಕಾಪಾಡುತ್ತದೆ.
ಸಮಾಜವಾದಿ
ಸಮಾಜವಾದಿ ಪದವು ಪೀಠಿಕೆಗೆ ೧೯೭೬ರಲ್ಲಿ ೪೨ನೇ ತಿದ್ದುಪಡಿಯಿಂದ ಸೇರಿಸಲ್ಪಟ್ಟಿತು. ಇದರ ಅರ್ಥ ಸಾಮಾಜಿಕ ಮತ್ತು ಆರ್ಥಿಕ ಸಮಾನತೆ. ಸಾಮಾಜಿಕ ಸಮಾನತೆಯ ಅರ್ಥ ಧರ್ಮ, ಜಾತಿ, ಲಿಂಗ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ತಾರತಮ್ಯ ಮಾಡದೇ ಇರುವುದು. ಸಾಮಾಜಿಕ ಸಮಾನತೆಯ ಅಡಿಯಲ್ಲಿ ಎಲ್ಲರಿಗೂ ಸಮಾನ ಸ್ಥಾನಮಾನ ಮತ್ತು ಅವಕಾಶಗಳಿವೆ. ಆರ್ಥಿಕ ಸಮಾನತೆಯ ಅರ್ಥ ಭಾರತ ಸರಕಾರ ಎಲ್ಲರಿಗೂ ಸಮಾನ ಆರ್ಥಿಕ ಅವಕಾಶಗಳನ್ನು ಹಾಗೂ ಎಲ್ಲರಿಗೂ ಯೋಗ್ಯವಾದ ಜೀವನಮಟ್ಟವನ್ನು ಕಲ್ಪಿಸಲು ಯತ್ನಿಸುತ್ತದೆ. ಇದರ ತತ್ತ್ವಾರ್ಥ ಒಂದು ಸುಖೀ ರಾಜ್ಯದ ನಿರ್ಮಾಣಕ್ಕೆ ಬದ್ಧರಾಗುವುದಾಗಿದೆ.
ಭಾರತವು ಮಿಶ್ರ ಅರ್ಥವ್ಯವಸ್ಥೆಯನ್ನು ಅಳವಡಿಸಿಕೊಂಡಿದೆ. ಸರಕಾರವು ಸಾಮಾಜಿಕ ಸಮಾನತೆಯನ್ನು ಸಾಧಿಸಲು ಬಹಳಷ್ಟು ಕಾನೂನುಗಳನ್ನು ಮಾಡಿದೆ. ಇವುಗಳಲ್ಲಿ ಅಸ್ಪೃಶ್ಯತೆ ಮತ್ತು ಜೀತಪದ್ಧತಿ ನಿವಾರಣೆ, ಸಮಾನ ಭತ್ಯೆ ಮಸೂದೆ ಮತ್ತು ಬಾಲಕಾರ್ಮಿಕ ನಿಷೇಧ ಮಸೂದೆ ಸೇರಿವೆ.
ಜಾತ್ಯತೀತ
ಜಾತ್ಯತೀತ ಎಂಬ ಪದವನ್ನು ಪೀಠಿಕೆಗೆ ೧೯೭೬ರ ೪೨ನೇ ತಿದ್ದುಪಡಿಯ ಮೂಲಕ ಸೇರಿಸಲಾಯಿತು. ಇದರ ಅರ್ಥ ಎಲ್ಲ ಧರ್ಮಗಳ ಸಮಾನತೆ ಮತ್ತು ಧಾರ್ಮಿಕ ಸಹನೆ. ಭಾರತವು ಯಾವುದೇ ಅಧಿಕೃತ ಧರ್ಮವನ್ನು ಹೊಂದಿಲ್ಲ. ಪ್ರತಿಯೊಬ್ಬರಿಗೂ ತಮ್ಮ ಆಯ್ಕೆಯ ಧರ್ಮದ ಪ್ರಚಾರವನ್ನು ಮಾಡುವ ಹಾಗೂ ಆಚರಿಸುವ ಹಕ್ಕಿದೆ. ಸರಕಾರವು ಯಾವುದೇ ಧರ್ಮದ ಪರ ಅಥವಾ ವಿರುದ್ಧ ನಿಲುವನ್ನು ತಳೆಯುವಂತಿಲ್ಲ. ಎಲ್ಲ ಪ್ರಜೆಗಳು ತಮ್ಮ ಧಾರ್ಮಿಕ ಭಾವನೆಗಳ ಹೊರತಾಗಿಯೂ ಕಾನೂನಿನ ಕಣ್ಣಿನಲ್ಲಿ ಸಮಾನರಾಗಿದ್ದಾರೆ. ಸರಕಾರೀ ಅನುದಾನಿತ ಶಾಲೆಗಳಲ್ಲಿ ಯಾವುದೇ ಧರ್ಮದ ಆಚಾರ-ಪ್ರಚಾರ ನಡೆಯುವಂತಿಲ್ಲ. ಬೊಮ್ಮಾಯಿ vs ಭಾರತ ಸರಕಾರ ದಾವೆಯಲ್ಲಿ ಸರ್ವೋಚ್ಛ ನ್ಯಾಯಾಲಯವುಜಾತ್ಯತೀತತೆಯು ಭಾರತ ಸಂವಿಧಾನದ ವಿನ್ಯಾಸದ ಒಂದು ಸಮಗ್ರ ಅಂಗ ಎಂದು ಭಾವಿಸಿದೆ.
ಪ್ರಜಾಪ್ರಭುತ್ವ
ಪ್ರಜಾಪ್ರಭುತ್ವವಾದ ಭಾರತ ದೇಶದ ಪ್ರಜೆಗಳು ಕೇಂದ್ರ, ರಾಜ್ಯ ಹಾಗೂ ಪ್ರಾದೇಶಿಕ ವಿಭಾಗಗಳಲ್ಲಿ ತಮ್ಮ ಸರಕಾರವನ್ನು ಸಾರ್ವತ್ರಿಕ ಮತಾಧಿಕಾರದ ಪದ್ಧತಿಯ ಮೂಲಕ ಆರಿಸುತ್ತಾರೆ. ಭಾರತದ ಎಲ್ಲ ೧೮ ವರ್ಷಗಳ ವಯೋಮಿತಿಯ ಮೇಲಿರುವ ಕಾನೂನುಬದ್ಧ ಮತ ಚಲಾಯಿಸುವ ಅಧಿಕಾರ ಹೊಂದಿರುವ ಪ್ರಜೆಗಳು ಧರ್ಮ, ಜಾತಿ, ಮತ, ಲಿಂಗ ಅಥವಾ ಶಿಕ್ಷಣ ಮಟ್ಟದ ಭೇದವಿಲ್ಲದೇ ಮತ ಚಲಾಯಿಸುವ ಹಕ್ಕನ್ನು ಹೊಂದಿದ್ದಾರೆ.
ಗಣತಂತ್ರ
ಗಣತಂತ್ರವು ರಾಜಪ್ರಭುತ್ವಕ್ಕೆ ವಿರುದ್ದವಾದದ್ದು. ರಾಜಪ್ರಭುತ್ವದಲ್ಲಿ ಒಂದು ರಾಜ್ಯದ ಮುಖ್ಯಸ್ತರು ವಂಶ ಪಾರಂಪರೆಯ ಆಧಾರದ ಮೇಲೆ ಜೀವಮಾನದವರೆಗೆ ಅಥವಾ ಸಿಂಹಾಸನವನ್ನು ತ್ಯಜಿಸುವವರೆಗೆ ನೇಮಿತಗೊಳ್ಳುತ್ತಾರೆ. ಪ್ರಜಾಪ್ರಭುತ್ವದಲ್ಲಿ ಗಣತಂತ್ರ ಎಂದರೆ " ಒಂದು

ಭಾರತೀಯ ಗಣರಾಜ್ಯೋತ್ಸವ

 ಭಾರತೀಯ ಗಣರಾಜ್ಯೋತ್ಸವ


ವರ್ಷದ ಜನವರಿ ೨೬ ರಂದು ಆಚರಿಸಲಾಗುವ ದಿನಾಚರಣೆ. ಭಾರತೀಯ ಸoವಿಧಾನ ಜಾರಿಗೆ ಬ೦ದು ಭಾರತವುಗಣರಾಜ್ಯವಾದದ್ದು ಜನವರಿ ೨೬, ೧೯೫೦ ರಂದು. ಇದರ ಪ್ರಯುಕ್ತ ಈ ದಿನವನ್ನು ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ. ಜನವರಿ ೨೬ ಭಾರತದಾದ್ಯಂತ ಸರ್ಕಾರಿ ರಜಾ ದಿನ. ಸಾಮಾನ್ಯವಾಗಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ಇದರ ಪ್ರಯುಕ್ತ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದುಂಟು. ಇದಲ್ಲದೆ ನವದೆಹಲಿಯಲ್ಲಿಭಾರತ ಸಶಸ್ತ್ರ ಪಡೆಗಳ ಪ್ರಭಾತಭೇರಿ ನಡೆಯುತ್ತದೆ.

ಆಗಸ್ಟ್ ೧೫ ೧೯೪೭ರಂದು ಭಾರತ ಸ್ವತಂತ್ರವಾದ ನಂತರ ಆಗಸ್ಟ್ ೨೯ರಂದು ಡಾ. ಅಂಬೇಡ್ಕರ್ ರವರ ನೇತೃತ್ವದಲ್ಲಿ ಎರಡು ಸಮಿತಿಯ ನೇಮಕಾತಿಯನ್ನು ಮಾಡಲಾಯಿತು. ಈ ಸಮಿತಿಯು ಸಂವಿಧಾನದ ಕರಡು ಪ್ರತಿಯನ್ನು ತಯಾರಿಸಿ ನವೆಂಬರ್ ೪ ೧೯೪೭ರಂದು ಶಾಸನಸಭೆಯಲ್ಲಿ ಮಂಡಿಸಿತು.ನವೆಂಬರ್೨೬,೧೯೪೯ ರಂದು ಅಂಗೀಕರಿಸಲ್ಪಟ್ಟು ಅನೇಕ ಪರಿಶೀಲನೆ ಮತ್ತು ತಿದ್ದುಪಡಿಗಳ ನಂತರ ಜನವರಿ ೨೬ ೧೯೫೦ರಂದು ಭಾರತದ ಸಂವಿಧಾನ ಜಾರಿಗೆ ಬಂದಿತು. ಭಾರತದ ಸ್ವಾತ೦ತ್ರ್ಯ ಚಳುವಳಿಯಲ್ಲಿ ಜನವರಿ ೨೬, ೧೯೨೯ ರಂದು ಭಾರತ ರಾಷ್ಟ್ರೀಯ ಕಾ೦ಗ್ರೆಸ್ ಪೂರ್ಣ ಸ್ವರಾಜ್ಯದ ಧ್ಯೇಯವನ್ನು ಹಾಕಿಕೊ೦ಡಿತ್ತು. ಲಾಹೋರ್ನಲ್ಲಿ ನಡೆದ ಕಾ೦ಗ್ರೆಸ್ ಅಧಿವೇಶನದಲ್ಲಿ ಈ ನಿರ್ಧಾರವನ್ನು ತೆಗೆದುಕೊ೦ಡು ಈ ದಿನವನ್ನು ಪೂರ್ಣ ಸ್ವರಾಜ್ಯ ದಿನ ಎಂದು ಘೋಷಿಸಲಾಗಿತ್ತು. ಇದೇ ಕಾರಣಕ್ಕಾಗಿಯೇ ಸ್ವಾತ೦ತ್ರ್ಯಾನ೦ತರ ಭಾರತದ ಸ೦ವಿಧಾನವನ್ನು ಈ ದಿನದ೦ದೇ ಜಾರಿಗೆ ತರಲಾಯಿತು.
ಇಂದು ಭಾರತೀಯ ಪ್ರಜೆಗಳಿಗೆ ತಮ್ಮನ್ನು ತಾವೇ ಆಳಿಕೊಳ್ಳುವ ಅವಕಾಶ ದೊರೆತ ಪವಿತ್ರ ದಿನ. ಬ್ರಿಟಿಷರ ದಾಸ್ಯದಿಂದ ಮುಕ್ತಗೊಂಡ ಹಿಂದೂಸ್ತಾನಕ್ಕೆ, ಸ್ವಾತಂತ್ರ್ಯ ಸಿಕ್ಕು ಎರಡೂವರೆ ವರ್ಷಗಳ ಬಳಿಕ ಮಹಾ ಸಂವಿಧಾನವೊಂದು ಅರ್ಪಿತವಾಯ್ತು. ಅಂದು ಭಾರತದ ಪ್ರಜೆಗಳು ಸ್ವತಃ ತಮಗೇ ಪ್ರಭುಗಳಾದರು. ಪ್ರಜೆಗಳೇ ಪ್ರಭುಗಳಾದ 1950ರ ಜನವರಿ 26ರ ದಿನವನ್ನು ಗಣರಾಜ್ಯದಿನ ಎಂದು ಘೋಷಿಸಲಾಯಿತು.
ಭಾರತದ ಪ್ರಜೆಗಳನ್ನು ಆಳುವ ಶಾಸಕಾಂಗ, ನ್ಯಾಯ ಒದಗಿಸುವ ನ್ಯಾಯಾಂಗ ಹಾಗೂ ಜನರಿಗಾಗಿ ಕೆಲಸಮಾಡುವ ಕಾರ್ಯಾಂಗಗಳು ಹೇಗಿರಬೇಕು, ಯಾವೆಲ್ಲ ನೀತಿ ನಿಯಮ ಕಟ್ಟಳೆಗಳನ್ನು ಅವರು ಪಾಲಿಸಬೇಕು ಎಂಬೆಲ್ಲ ಸೂಚನೆಗಳನ್ನು ಹಾಕಿಕೊಟ್ಟ ಸಮಗ್ರ ಮಾಹಿತಿಗಳ ಗುಚ್ಚವೇ ಭಾರತದ ಸಂವಿಧಾನ. ಡಾ.ಬಿ.ಆರ್ ಅಂಬೇಡ್ಕರ್ ನೇತೃತ್ವದಲ್ಲಿ ರಚಿಸಲ್ಪಟ್ಟ ಈ ಸಂವಿಧಾನ, ಡಾ.ರಾಜೇಂದ್ರ ಪ್ರಸಾದ್‌ರ ಅಧ್ಯಕ್ಷತೆಯಲ್ಲಿ 1950, ಜನವರಿ 26ರಂದು ಅಂಗೀಕರಿಸಲ್ಪಟ್ಟಿತ್ತು.
ಭಾರತ ದೇಶದಲ್ಲಿ ಸಂವಿಧಾನ ಜಾರಿಯಲ್ಲಿ ಬಂದ ಮೇಲೆ ಪ್ರಜೆಗಳದೇ ಸರ್ಕಾರ ಅಸ್ತಿತ್ವಕ್ಕೆ ಬಂತು. ದೇಶದಲ್ಲಿ ತಮಗೆ ಸ್ವಾತಂತ್ರ್ಯವಿದೆ, ತಮ್ಮನ್ನಾಳುವವರನ್ನು ತಾವೇ ಆಯ್ಕೆ ಮಾಡಿಕೊಳ್ಳುವ ಅವಕಾಶವಿದೆ ಎಂಬ ಸಂತಸ ಇಡೀ ದೇಶದ ಜನರಲ್ಲಿ ಪ್ರತಿಫಲಿಸಿತ್ತು. ಜನರಲ್ಲಿ ನಿಧಾನವಾಗಿ ಸಂವಿಧಾನ, ಸರಕಾರದ ಮೇಲೆ ವಿಶ್ವಾಸ ಬೆಳೆಯಲು ಪ್ರಾರಂಭವಾಯಿತು. ಸಾಲು ಸಾಲಾಗಿ ಬಂದ ಪಂಚವಾರ್ಷಿಕ ಯೋಜನೆಗಳು ನಮ್ಮ ದೇಶವನ್ನು ಅಭಿವೃದ್ಧಿಪಡಿಸುತ್ತಾ ಸಾಗಿದವು. ಸಾಕ್ಷರತೆಯ ಪ್ರಮಾಣ ಹೆಚ್ಚಾಯಿತು. ವಿದ್ಯಾವಂತರ ಸಂಖ್ಯೆಯಲ್ಲಿ ಏರಿಕೆಯಾಯ್ತು. ಕೃಷಿಯಲ್ಲಿ ಸಾಕಷ್ಟು ಅಭಿವೃದ್ಧಿಯಾಯಿತು. ಹಸಿರು ಕ್ರಾಂತಿ, ಕ್ಷೀರ ಕ್ರಾಂತಿಗಳು ನಡೆದವು. ನಗರಗಳೂ ಬೆಳೆದವು, ವಿದೇಶಿ ಕಂಪನಿಗಳು ನಮ್ಮ ದೇಶದಲ್ಲಿ ಬಂಡವಾಳ ಹೂಡಿದವು. ನಿಧಾನವಾಗಿ ಆಧುನಿಕತೆಯ ಸೆಳೆತಕ್ಕೆ ಭಾರತದ ಮಹಾನಗರಗಳು ಒಗ್ಗಿಕೊಂಡವು. ಜನರ ಆದಾಯದಲ್ಲಿ ಹೆಚ್ಚಳವಾಯಿತು, ಜೀವನ ಶೈಲಿಯಲ್ಲಿ ಅಭಿವೃದ್ಧಿಯಾಯಿತು. ದೇಶ ವೈಜ್ಞಾನಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಪಡೆದುಕೊಂಡಿತು. ಇವೆಲ್ಲವೂ ಸಾಧ್ಯವಾಗಿದ್ದು ಪ್ರಜಾಪ್ರಭುತ್ವದಿಂದ.
ಭಾರತ ಪ್ರಜಾರಾಜ್ಯವಾಗಿ  ಇಷ್ರ್ಷಟು ಗಳಲ್ಲಿ ಇಡೀ ರಾಷ್ಟ್ರಕ್ಕೆ ರಾಷ್ಟ್ರವೇ ಸಾಕಷ್ಟು ಬದಲಾಗಿದೆ. ಜನರ ವಿಚಾರ, ಆಚಾರ, ನಡತೆ, ನಂಬಿಕೆಗಳಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಬೆಳವಣಿಗೆ ಧನಾತ್ಮಕವಾಗಿಯೂ ಆಗಿದೆ ಋಣಾತ್ಮಕವಾಗಿಯೂ ಆಗಿದೆ ಎಂಬುದನ್ನು ನಾವು ಒಪ್ಪಿಕೊಳ್ಳಲೇ ಬೇಕು. ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದಲ್ಲಿ ಸ್ವಾತಂತ್ರ್ಯ ಕೆಲವೊಮ್ಮೆ ಸ್ವೇಚ್ಛಾಚಾರವಾಗುತ್ತಿದೆ. ಇಂದಿನ ಭಾರತದ ಪ್ರಜೆಗಳಲ್ಲಿ ದೇಶಪ್ರೇಮ ಕುಂದಿದೆ. ಅಂದಿನ ಸ್ವಾತಂತ್ರ್ಯ ಹೋರಾಟಗಾರರಂತೆ, ದೇಶಕ್ಕಾಗಿ ತನು, ಮನ, ಧನ ಅರ್ಪಿಸುವವರು ಈಗ ಯಾರೂ ಇಲ್ಲ. ಎಲ್ಲರಿಗೂ ತಮ್ಮ ಲಾಭವೇ ಮುಖ್ಯ.
ಅನರ್ಹ ಅಭ್ಯರ್ಥಿಗಳು ಪ್ರಚಾರದ ಗಿಮಿಕ್‌ಗಳಿಂದ ಗೆದ್ದು ಬಂದು ಅಧಿಕಾರಕ್ಕೆ ಬಂದು ದೇಶವನ್ನೇ ಹಾಳುಗೆಡಹಿದಂತಹ ಅದೆಷ್ಟೋ ಉದಾಹರಣೆಗಳ ಜೊತೆ ಅರ್ಹ ಅಭ್ಯರ್ಥಿಯಾಗಿದ್ದ ಜನನಾಯಕರೂ ಅಧಿಕಾರದ ಆಸೆಗೆ ಬಿದ್ದು ಭ್ರಷ್ಟರಾಗಿರುವ ಉದಾಹಣೆಗಳೂ ಸಾಕಷ್ಟಿವೆ. ಇದು ಪ್ರಜಾಪ್ರಭುತ್ವ ರಾಷ್ಟ್ರದ ರಾಜಕೀಯ ಪರಿಸ್ಥಿತಿ.
ಸಾಮಾಜಿಕವಾಗಿಯೂ ಜನರು ತಪ್ಪು ದಾರಿ ಹಿಡಿಯುತ್ತಿರುವುದಕ್ಕೂ ಸ್ವಾತಂತ್ರ್ಯ ಸ್ವೇಚ್ಛೆಯಾಗಿದ್ದೇ ಕಾರಣ ಎಂಬುದು ಕೂಡ ಹಲವರ ನಿಲುವು. ನಮ್ಮ ಸುತ್ತಮುತ್ತಲಿನ ಸಮಾಜದಲ್ಲಿ ನಡೆಯುತ್ತಿರುವ ಅದೆಷ್ಟೋ ಅತ್ಯಾಚಾರ, ಅನಾಚಾರ, ಕೊಲೆ ಸುಲಿಗೆಯಂತಹ ಕೃತ್ಯವನ್ನು ಹತ್ತಿಕ್ಕಲು ನಮ್ಮ ಪ್ರಜಾಪ್ರಭುತ್ವ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲವೇ ಎಂಬ ಅನುಮಾನವೂ ಜನರ ಮನಸ್ಸಿನಲ್ಲಿ ಬಂದಿರಲೂಬಹುದು.
ದೇಶದ ಜನರ ಅಭಿವೃದ್ಧಿಗಾಗಿ, ಶಾಂತಿ ಸುವ್ಯವಸ್ಥೆಯನ್ನು ಮನಸ್ಸಿನಲ್ಲಿಟ್ಟುಕೊಂಡ ಸಮಗ್ರ ಏಳಿಗೆಗಾಗಿ ನಮ್ಮ ಹಿರಿಯರು ರಚಿಸಿದ ಸಂವಿಧಾನದಲ್ಲಿ ಈಗ ಸಾಕಷ್ಟು ಬದಲಾವಣೆಗಳನ್ನೂ ಮಾಡಲಾಗಿದೆ. 444 ವಿಧಿಗಳನ್ನೂ, 10 ಅನುಚ್ಛೇದಗಳನ್ನೂ, ಹೊಂದಿರುವ ಈ ಸಂವಿಧಾನ, ಯಾವುದೇ ದೇಶದ ಲಿಖಿತ ಸಂವಿಧಾನಕ್ಕಿಂತ ದೀರ್ಘವಾದುದ್ದು. ಸಂವಿಧಾನವನ್ನು ಸಿದ್ಧಪಡಿಸುವಾಗ ಸಂವಿಧಾನ ರಚನಾ ಸಮಿತಿಯಲ್ಲಿದ್ದ ಆ ಎಲ್ಲ ನಾಯಕರೂ ಭವ್ಯ ಭಾರತದ ಸುಂದರ ಅಭಿವೃದ್ಧಿಯ ಕನಸು ಕಂಡಿದ್ದರು. ಸಂವಿಧಾನ ಎಂಬ ಪೌಷ್ಠಿಕಾಂಶದಿಂದ ಭಾರತದ ಅಭಿವೃದ್ಧಿ ಎಂಬ ಮಗು ಮುಂದೆ ಏಳಿಗೆಯತ್ತ ಹೆಜ್ಜೆ ಹಾಕುತ್ತೆ ಎಂಬ ಕಲ್ಪನೆಯಲ್ಲಿದ್ದರು. ದೇಶದ ಸಮಗ್ರ ಏಳಿಗೆಯ ಕನಸು ಕಂಡರು. ಪುಟ್ಟ ಮಗುವಿನ ಭವಿಷ್ಯದ ಬಗ್ಗೆ ತಾಯಿ ಕಲ್ಪಿಸಿಕೊಂಡಂತೆ. ಆದರೆ ಅವರ ನಿರೀಕ್ಷೆಯ ಮಟ್ಟದಲ್ಲಿ ಇಂದಿನ ಸಮಾಜ, ದೇಶ ಅಭಿವೃದ್ಧಿಯನ್ನು ಹೊಂದಿದೆಯೇ ಎಂಬ ಪ್ರಶ್ನೆಗೆ ಯಾರ ಬಳಿ ಉತ್ತರವಿದೆ ?
ಗಣರಾಜ್ಯ ದಿನ ಎಂದರೆ ಸರಕಾರಿ ರಜೆ. ಅನ್ನುವಷ್ಟರ ಮಟ್ಟಿಗೆ ಇಂದಿನ ಬಹುತೇಕ ಭಾರತೀಯ ಪ್ರಜೆಗಳು ಈ ಸುಂದರ ದಿನವನ್ನು ಅರ್ಥೈಸಿಕೊಂಡಂತಿದೆ. ರಾಜಧಾನಿಗಳಲ್ಲಿ ನಡೆಯುವ ಗಣರಾಜ್ಯದಿನದ ಆಚರಣೆಗಳನ್ನು ಟೀವಿಯಲ್ಲಿ ನೋಡಿ ಸಂತಸ ಪಟ್ಟು, ಟಿವಿ ಕಾರ್ಯಕ್ರಮ ಮುಗಿದಾಗ ಭವ್ಯ ಭಾರತದ ಪ್ರಜೆಗಳ ಗಣರಾಜ್ಯ ದಿನದ ಆಚರಣೆಯೂ ಮುಗಿದು ಹೋಗುತ್ತದೆ.
ಎಲ್ಲ ಧಾರ್ಮಿಕ ಹಬ್ಬಗಳಂತೆ, ರಾಷ್ಟ್ರೀಯ ಹಬ್ಬಗಳೂ ರಾಷ್ಟ್ರದ ಮನೆ ಮನೆಗಳಲ್ಲಿ ಮನ ಮನಗಳಲ್ಲಿ ಆಚರಿಸುವಂತಾಗಬೇಕು.ದೇಶ, ದೇಶದ ಅಭಿವೃದ್ಧಿ, ರಾಜಕೀಯ ನೀತಿ, ದೇಶ ರಕ್ಷಣೆ, ನ್ಯಾಯಾಂಗ, ಕಾರ್ಯಾಂಗಗಳ ಬಗ್ಗೆ ಜನರಲ್ಲಿ ಗೌರವ ಮೂಡುವಂತಹ ವಾತಾವರಣ ನಿರ್ಮಾಣವಾಗಬೇಕು. ಪ್ರತಿಯೊಬ್ಬ ಪ್ರಜೆಯಲ್ಲಿಯೂ ತಾನು ಭಾರತೀಯ ಎಂಬ ಪ್ರಜ್ಞೆ ಜಾಗೃತವಾಗಿರಬೇಕು, ಶಾಂತಿ ಮಾರ್ಗದಿಂದ ಸ್ವಾತಂತ್ರ್ಯ ಪಡೆದುಕೊಂಡ ದೇಶ ನಮ್ಮದು. ನಮ್ಮ ಧ್ಯೇಯ ಪ್ರತಿಯೊಬ್ಬ ಭಾರತೀಯನ ಮನಸ್ಸಿನಲ್ಲಿಯೂ ಅನುರಣಿಸುತ್ತಿರಬೇಕು.
ಸುಸಂಸ್ಕೃತ ಸಮಾಜದ, ಸರ್ವತೋಮುಖ ಅಭಿವೃದ್ಧಿ ಹಾಗೂ ಸಂಪೂರ್ಣ ಸ್ವಾತಂತ್ರ್ಯದ ಯಶಸ್ವಿ ದೇಶದ ಕನಸು ಕಂಡು, ಆ ದೇಶಕ್ಕಾಗಿ ಬೃಹತ್‌ ಸಂವಿಧಾನ ರಚಿಸಿ, ದಾರಿ ಹಾಕಿಕೊಟ್ಟ ಆ ನಾಯಕರ, ಮಹಾತ್ಮರ ಉದ್ದೇಶ ನಿಜವಾಗಿಯೂ ಸಾಕಾರಗೊಳ್ಳಬೇಕು. ಆ ನಾಯಕರ ಉದ್ದೇಶವನ್ನು ನೆನಪಿಸಿಕೊಂಡು, ದಾರಿ ತಪ್ಪದೇ ಸರಿ ದಾರಿಯಲ್ಲಿ ಸಾಗುವಂತಾಗಬೇಕೆಂಬ ಉದ್ದೇಶ ಇಂಥ ರಾಷ್ಟ್ರೀಯ ದಿನಗಳ ಆಚರಣೆಯ ಹಿಂದಿದೆ.
ಅಖಂಡ ಭಾರತದ ಕೋಟಿ ಕೋಟಿ ಪ್ರಜೆಗಳಿಗೂ ದೇಶದ ಜವಾಬ್ದಾರಿಯನ್ನು ಅಧಿಕೃತವಾಗಿ ನೀಡಿದ ಶುಭ ದಿನ ಇವತ್ತು. ಪ್ರತಿಯೊಬ್ಬ ಭಾರತೀಯನೂ ದೇಶದ ಅಭಿವೃದ್ಧಿಗೆ ಜವಾಬ್ದಾರನಾಗಿರುತ್ತಾನೆ. ಗಣರಾಜ್ಯದಿನದಂತೆ ಶುಭ ದಿನದಲ್ಲಿ ನಮ್ಮ ಎಲ್ಲ ಜವಾಬ್ಧಾರಿಗಳಿಗೂ ಬದ್ಧರಾಗಿರುತ್ತೇನೆ ಎಂಬ ಪ್ರತಿಜ್ಞೆ ಮಾಡುವುದರ ಮೂಲಕ, ಗಣರಾಜ್ಯದಿನದ ಆಚರಣೆಯನ್ನು ಅರ್ಥಪೂರ್ಣಗೊಳಿಸಬೇಕು. ಆಗಲೇ ಈ ಗಣರಾಜ್ಯದಿನಕ್ಕೆ ನಿಜವಾದ ಅರ್ಥ ಬರುತ್ತದೆ.

ಸರ್ವಜ್ಞ ಜಯಂತಿಯ ಶುಭಾಶಯ

 


"ಜಾತಿಹೀನನ ಮನೆಯ ಜ್ಯೋತಿ ತಾ ಹೀನವೆ ಜಾತಿ ವಿಜಾತಿ ಎನಬೇಡ ಶಿವನೊಲಿದಾತನೆ ಜಾತ ಸರ್ವಜ್ಞ"
"ಸರ್ವಜ್ಞ ನೆಂಬುವನು ಗರ್ವದಿಂದಾದವನೆ ಸರ್ವರೊಳಗೊಂದು ನುಡಿಗಲಿತು ವಿದ್ಯೆಯಾ ಪರ್ವತವೇ ಆದ ಸರ್ವಜ್ಞ"
"ಹರನೆಂಬ ದೈವ ನಮಗುಂಟು, ತಿರಿವರಿಂ ಸಿರಿವಂತರಾರು ಸರ್ವಜ್ಞ"
"ಮಂಡೆ ಬೋಳಿಸಿಕೊಂಡು ತುಂಡುಗಂಬಳಿ ಹೊದೆದು ಹಿಂಡನಗಲಿದ ಗಜದಂತೆ ಇಪ್ಪವನ ಕಂಡು ನಂಬುವುದು ಸರ್ವಜ್ಞ"

16ನೇ ಶತಮಾನದಲ್ಲಿ ಕರ್ನಾಟಕ ಕಂಡ ಒಬ್ಬ ಶ್ರೇಷ್ಠ ವಚನಕಾರ, ದಾರ್ಶನಿಕ ಕವಿ ಸರ್ವಜ್ಞನ ಜಯಂತಿ ಆಚರಣೆ ಮಾಡಲಾಗುತ್ತಿದೆ.

ಹಾವೇರಿ ಜಿಲ್ಲೆಯ ಅಬಲೂರು ಸರ್ವಜ್ಞನ ಜನ್ಮಸ್ಥಳ. ಜನರ ಆಡುಭಾಷೆಯಲ್ಲಿ ತ್ರಿಪದಿಗಳನ್ನು ರಚಿಸಿ ಸಮಾಜದ ಅಂಕುಡೊಂಕುಗಳನ್ನು ಚಿಕಿತ್ಸಕ ನೋಟದೊಂದಿಗೆ ತಿದ್ದಿದ ಸಮಾಜ ಸುಧಾರಕ.

ಸರ್ವಜ್ಞನ ತ್ರಿಪದಿಗಳು ಕನ್ನಡ ಸಾಹಿತ್ಯ ಸಿರಿಗೆ ಅಮೂಲ್ಯ ಕೊಡುಗೆಯಾಗಿದೆ. ತ್ರಿಪದಿಗಳು ಸಾರುವ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ. ಇವುಗಳು ಹಲವು ಭಾಷೆಗಳಿಗೆ ಭಾಷಾಂತರಗೊಂಡಿದ್ದು, ಭಾಷೆ ಮತ್ತು ಗಡಿಗಳ ಎಲ್ಲೆ ಮೀರಿ ಕರ್ನಾಟಕದ ಕೀರ್ತಿಯನ್ನು ಬೆಳಗಿಸಿವೆ.

ಇಂದು ರಾಜ್ಯದೆಲ್ಲಡೆ ಸರ್ವಜ್ಞನ ಜನ್ಮದಿನಾಚರಣೆಯನ್ನು ಆಚರಿಸಲಾಗಿದೆ.






ಅಂತಿಕ್ಕು ಇಂತಿಕ್ಕು ಎಂತಿಕ್ಕು ಎನಬೇಡ
ಚಿಂತೆಯಲಿ ದೇಹ ಬಡವಕ್ಕು ಶಿವ
ತೋರಿದಂತಿಹುದೇ ಲೇಸು ಸರ್ವಜ್ಞ.


🌺
ಆದಿ ದೈವವನು ತಾ ಭೇದಿಸಲಿಕರಿಯದಲೆ
ಹಾದಿಯಾ ಕಲ್ಲಿಗೆಡೆ ಮಾಡಿ ನಮಿಸುವಾ
ಮಾದಿಗರ ನೋಡು ಸರ್ವಜ್ಞ.


🌺
ತನ್ನಲಿಹ ಲಿಂಗವನು ಮನ್ನಿಸಲಿಕರಿಯದಲೆ
ಬಿನ್ನಣದಿ ಕಟೆದ ಪ್ರತಿಮೆಗಳಿಗೆರಗುವಾ
ಅನ್ಯಾಯ ನೋಡು ಸರ್ವಜ್ಞ.


🌺
ಉಣಬಂದ ಜಂಗಮಕೆ ಉಣಬಡಿಸಲೊಲ್ಲದಲೆ
ಉಣದಿಪ್ಪ ಲಿಂಗಕುಣಬಡಿಸಿ ಕೈ ಮುಗಿವ
ಬಣಗುಗಳ ನೋಡು ಸರ್ವಜ್ಞ.


🌺
ಕಲ್ಲು ಕಲ್ಲನೆ ಒಟ್ಟಿ ಕಲ್ಲಿನಲೆ ಮನೆಕಟ್ಟಿ
ಕಲ್ಲ ಮೇಲ್ಕಲ್ಲ ಕೊಳುವ ಮಾನವರೆಲ್ಲ
ಕಲ್ಲಿನಂತಿಹರು ಸರ್ವಜ್ಞ.


🌺
ಇಂದ್ರನಾನೆಯನೇರಿ ಒಂದನೂ ಕೊಡಲರಿಯ
ಚಂದ್ರಶೇಖರನು ಮುದಿಯೆತ್ತನೇರಿ
ಬೇಕೆಂದುದನು ಕೊಡುವ ಸರ್ವಜ್ಞ.


🌺
ಲಿಂಗಕ್ಕೆ ಕಡೆ ಎಲ್ಲಿ ? ಲಿಂಗಿಲ್ಲದೆಡೆಯೆಲ್ಲಿ ?
ಲಿಂಗದೊಳು ಜಗವು ಅಡಗಿಹುದು ಲಿಂಗವನು
ಹಿಂಗಿದವರುಂಟೇ ? ಸರ್ವಜ್ಞ.


🌺
ಆಗಿಲ್ಲ ಹೋಗಿಲ್ಲ ಮೇಗಿಲ್ಲ ಕೆಳಗಿಲ್ಲ
ತಾಗಿಲ್ಲ ತಪ್ಪು ತಡೆಯಿಲ್ಲ, ಲಿಂಗಕ್ಕೆ
ದೇಗುಲವೇ ಇಲ್ಲ ಸರ್ವಜ್ಞ.


🌺
ಕಾಯ ಕಮಲವೇ ಸಜ್ಜೆ ಜೀವರತುನವೇ ಲಿಂಗ
ಭಾವ ಪುಷ್ಪದಿಂ ಶಿವಪೂಜೆ ಮಾಡುವವನ
ದೇವನೆಂದೆಂಬೆ ಸರ್ವಜ್ಞ.


🌺
ಓದು ವಾದಗಳೇಕೆ ? ಗಾದೆಯಾ ಮಾತೇಕೆ ?
ವೇದ ಪುರಾಣ ತನಗೇಕೆ ? ಲಿಂಗದಾ
ಹಾದಿಯರಿಯದವಗೆ ಸರ್ವಜ್ಞ.


🌺
ಊರಿಂಗೆ ದಾರಿಯನು ಆರು ತೋರಿದರೇನು ?
ಸಾರಾಯದಾ ನಿಜವ ತೋರುವ ಗುರುವು ತಾ
ನಾರಾದರೇನು ? ಸರ್ವಜ್ಞ.


🌺
ಹಿರಿಯ ನಾನೆನಬೇಡ ಗುರುವ ನಿಂದಿಸಬೇಡ
ಬರೆವವರ ಕೂಡ ಹಗೆ ಬೇಡ ಬಂಗಾರ
ದೆರವು ಬೇಡೆಂದ ಸರ್ವಜ್ಞ.


🌺
ಚಿತ್ತವಿಲ್ಲದೆ ಗುಡಿಯ ಸುತ್ತಿದಡೆ ಫಲವೇನು ?
ಎತ್ತು ಗಾಣವನು ಹೊತ್ತು ತಾ ನಿತ್ಯದಲಿ
ಸುತ್ತಿ ಬಂದಂತೆ ಸರ್ವಜ್ಞ.


🌺
ಮನದಲ್ಲಿ ನೆನೆವಂಗೆ ಮನೆಯೇನು ಮಠವೇನು ?
ಮನದಲ್ಲಿ ನೆನೆಯದಿರುವವನು ದೇಗುಲದ
ಕೊನೆಯಲಿದ್ದೇನು ? ಸರ್ವಜ್ಞ.


🌺
ಲಿಂಗದಾ ಗುಡಿ ಲೇಸು ಗಂಗೆಯಾ ತಡಿ ಲೇಸು
ಲಿಂಗಸಂಗಿಗಳ ನುಡಿ ಲೇಸು, ಭಕ್ತರಾ
ಸಂಗವೇ ಲೇಸು ಸರ್ವಜ್ಞ.


🌺
ಸತಿಯರಿರ್ದಡೆ ಏನು ? ಸುತರಾಗಿ ಫಲವೇನು ?
ಶತಕೋಟಿ ಧನವ ಗಳಿಸೇನು? ಭಕ್ತಿಯಾ
ಸ್ಥಿತಿಯಿಲ್ಲದನಕ ಸರ್ವಜ್ಞ.


🌺
ಕಚ್ಚೆ ಕೈ ಬಾಯಿಗಳು ಇಚ್ಚೆಯಲಿ ಇದ್ದಿಹರೆ
ಅಚ್ಯುತನು ಅಪ್ಪ ಅಜನಪ್ಪ ಲೋಕದಲಿ
ನಿಶ್ಚಿಂತನಪ್ಪ ಸರ್ವಜ್ಞ.


🌺
ಭಿತ್ತಿಯಾ ಚಿತ್ರದಲಿ ತತ್ವ ತಾ ನೆರೆದಿಹುದೇ ?
ಚಿತ್ರತ್ವ ತನ್ನ ನಿಜದೊಳಗೆ, ತ್ರೈ ಜಗದ
ತತ್ವ ತಾನೆಂದ ಸರ್ವಜ್ಞ.


🌺
ಜ್ಞಾನದಿಂದಲಿ ಇಹವು ಜ್ಞಾನದಿಂದಲಿ ಪರವು
ಜ್ಞಾನವಿಲ್ಲದಲೆ ಸಕಲವೂ ತನಗಿದ್ದು
ಹಾನಿ ಕಾಣಯ್ಯಾ ಸರ್ವಜ್ಞ.


🌺
ಕಲ್ಲಿನಲಿ ಮಣ್ಣಿನಲಿ ಮುಳ್ಳಿನಾ ಮೊನೆಯಲ್ಲಿ
ಎಲ್ಲಿ ನೆನೆದಲ್ಲಿ ಶಿವನಿರ್ಪ ಅವ ನೀನಿದ್ದಲ್ಲಿಯೇ
ಇರುವ ಸರ್ವಜ್ಞ.


🌺
ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ
ಬಣ್ಣಿಸುತ ಬರೆದ ಪಟದೊಳಗೆ ಇರುವಾತ
ತನ್ನೊಳಗೆ ಇರನೆ? ಸರ್ವಜ್ಞ.


🌺
ಇಲ್ಲಿಲ್ಲವೆಂಬುದನು ಇಲ್ಲಿಯೇ ಅರಸುವುದು
ಇಲ್ಲಿಲ್ಲವೆಂದರಿದ ಒಡನೆ ಜಗವೆಲ್ಲ
ಒಳಗಿಕ್ಕು ಸರ್ವಜ್ಞ.


🌺
ಏನಾದಡೇನಯ್ಯ ತಾನಾಗದಿರುವನಕ
ತಾನಾಗಿ ತನ್ನನರಿದಿರಲು ಲೋಕದಲಿ
ಏನಾದಡೇನು ? ಸರ್ವಜ್ಞ.


🌺
ತನ್ನ ತಾನರಿದವಂಗೆ ಭಿನ್ನ ಭಾವನೆಯಿಲ್ಲ
ತನ್ನವರು ಇಲ್ಲ ಪರರಿಲ್ಲ, ತ್ರೈಭುವನವೇ
ತನ್ನೊಳಗೆ ಇಹುದು ಸರ್ವಜ್ಞ.


🌺
ಕೋಟಿಯನು ಕೊಟ್ಟರೂ ಕೂಟ ಕರ್ಮಿಯ ಹೊಲ್ಲ
ನೋಟದಲಿ ನಿಜವನರಿವ ಸುಜ್ಞಾನಿಯಾ
ಕೂಟವೇ ಲೇಸು ಸರ್ವಜ್ಞ.


🌺
ಸಾಲು ವೇದಗಳೇಕೆ ? ಮೂಲ ಮಂತ್ರಗಳೇಕೆ ?
ಮೇಲು ಕೀಳೆಂಬ ನುಡಿಯೇಕೆ ? ತತ್ವದಾ
ಕೀಲನರಿದವಗೆ ಸರ್ವಜ್ಞ.


🌺
ಅಕ್ಕರವು ಲೆಕ್ಕಕ್ಕೆ ತರ್ಕ ತಾ ವಾದಕ್ಕೆ
ಮಿಕ್ಕ ಓದುಗಳು ತಿರುಪೆಗೆ, ಮೋಕ್ಷಕ್ಕಾ
ರಕ್ಕರವೇ ಸಾಕು ಸರ್ವಜ್ಞ.


🌺
ಎಣ್ಣೆ ಬೆಣ್ಣೆಯ ರಿಣವು ಅನ್ನವಸ್ತ್ರದ ರಿಣವು
ಹೊನ್ನು ಹೆಣ್ಣಿನಾ ರಿಣವು ತೀರಿದ ಕ್ಷಣದಿ
ಮಣ್ಣು ಪಾಲೆಂದ ಸರ್ವಜ್ಞ.


🌺
ಸಂಗವನು ತೊರೆದಂಗೆ ಅಂಗನೆಯರಿರಲೇಕೆ ?
ಬಂಗಾರವೇಕೆ ? ಬಲವೇಕೆ ? ಲೋಕದಾ
ಶೃಂಗಾರವೇಕೆ ? ಸರ್ವಜ್ಞ.


🌺
ವೇಷಗಳ ಧರಿಸೇನು? ದೇಶಗಳ ತಿರುಗೇನು?
ದೋಷಗಳ ಹೇಳಿ ಫಲವೇನು? ಮನಸಿನಾ
ಆಸೆ ಬಿಡದನಕ ಸರ್ವಜ್ಞ.


🌺
ಕತ್ತೆ ಬೂದಿಯಲಿ ಹೊರಳಿ ಮತ್ತೆ ಯತಿಯಪ್ಪುದೇ ?
ತತ್ವವರಿಯದಲೆ ಭಸಿತವಿಟ್ಟವ ಶುದ್ಧ
ಕತ್ತೆಯಂತೆಂದ ಸರ್ವಜ್ಞ.


🌺
ನಿತ್ಯ ನೇಮಗಳೇಕೆ ? ಮತ್ತೆ ಪೂಜೆಗಳೇಕೆ ?
ನೆತ್ತಿ ಬೋಳೇಕೆ ? ಜಡೆಯೇಕೆ ? ವದನದಲಿ
ಸತ್ಯವುಳ್ಳವಗೆ ಸರ್ವಜ್ಞ.


🌺
ಸಿರಿಬಂದ ಕಾಲಕ್ಕೆ ಕರೆದು ದಾನವ ಮಾಡು
ಪರಿಣಾಮವಕ್ಕು ಪದವಕ್ಕು ಕೈಲಾಸ
ನೆರೆಮನೆಯಕ್ಕು ಸರ್ವಜ್ಞ.


🌺
ಕೊಟ್ಟದ್ದು ಕುದಿಯಲಿ ಬೇಡ ಕೊಟ್ಟಾಡಿಕೊಳಬೇಡ
ಕೊಟ್ಟು ನಾ ಕೆಟ್ಟೆನೆನಬೇಡ ಶಿವನಲ್ಲಿ
ಕಟ್ಟಿಹುದು ಬುತ್ತಿ ಸರ್ವಜ್ಞ.


🌺
ಕೊಟ್ಟದ್ದು ತನಗೆ ಬಚ್ಚಿಟ್ಟದ್ದು ಪರರಿಗೆ
ಕೊಟ್ಟದ್ದು ಕೆಟ್ಟಿತೆನಬೇಡ ಮುಂದಕ್ಕೆ
ಕಟ್ಟಿಹುದು ಬುತ್ತಿ ಸರ್ವಜ್ಞ.


🌺
ಕೊಡುವಾತನೇ ಹರನು ಪಡೆವಾತನೇ ನರನು
ಒಡಲ ಒಡವೆಗಳು ಕೆಡೆದು ಹೋಗದ ಮುನ್ನ
ಕೊಡು ಪಾತ್ರವರಿದು ಸರ್ವಜ್ಞ.


🌺
ಉಣ್ಣದೊಡವೆಯ ಗಳಿಸಿ ಮಣ್ಣಿನೊಳು ತಾನಿರಿಸಿ
ಸಣ್ಣಿಸಿಯೆ ನೆಲನ ಸಾರಿಸಿದವನ ಬಾಯೊಳಗೆ
ಮಣ್ಣು ಕಾಣಯ್ಯ ಸರ್ವಜ್ಞ.


🌺
ಇದ್ದುದನು ಬಿಟ್ಟು ಹೊರಗಿದ್ದುದನೆ ಬಯಸುತಲೆ
ಇದ್ದು ಉಣದಿಪ್ಪ ಬಾಯೊಳಗೆ ಕತ್ತೆಯಾ
ಲದ್ದಿಯೇ ಬೀಳ್ಗು ಸರ್ವಜ್ಞ.


🌺
ಉಣ್ಣೆ ಕೆಚ್ಚಲೊಳಿರ್ದು ಉಣ್ಣದದು ನೊರೆವಾಲು
ಪುಣ್ಯವನು ಮಾಡಿ ಉಣಲೊಲ್ಲದವನಿರವು
ಉಣ್ಣೆಯಿಂ ಕಷ್ಟ ಸರ್ವಜ್ಞ.


🌺
ಉಳ್ಳಲ್ಲಿ ಉಣಲಿಲ್ಲ ಉಳ್ಳಲ್ಲಿ ಉಡಲಿಲ್ಲ
ಉಳ್ಳಲ್ಲಿ ದಾನ ಕೊಡದವನ ಒಡವೆಯದು
ಕಳ್ಳಂಗೆ ನೃಪಗೆ ಸರ್ವಜ್ಞ.


🌺
ಕೊಟ್ಟುಂಬ ಕಾಲದಲಿ ಕೊಟ್ಟುಣಲಿಕರಿಯದಲೆ
ಹುಟ್ಟಿನಾ ಒಳಗೆ ಜೇನಿಕ್ಕಿ ಪರರಿಂಗೆ
ಬಿಟ್ಟು ಹೋದಂತೆ ಸರ್ವಜ್ಞ.


🌺
ಅಪಮಾನದೂಟದಿಂದುಪವಾಸವಿರಲೇಸು
ನೃಪನೆಯ್ದೆ ಬಡಿವ ಒಡ್ಡೋಲಗದಿಂದವೆ
ತಪವು ಲೇಸೆಂದ ಸರ್ವಜ್ಞ.


🌺
ಸತ್ಯರಾ ನುಡಿ ತೀರ್ಥ ನಿತ್ಯರಾ ನುಡಿ ತೀರ್ಥ
ಉತ್ತಮರ ಸಂಗವದು ತೀರ್ಥ ಹರಿವ
ನೀರೆತ್ತಣದು ತೀರ್ಥ ಸರ್ವಜ್ಞ.


🌺
ಧನಕನಕವುಳ್ಳನಕ ದಿನಕರವೋಲಕ್ಕು
ಧನಕನಕ ಹೋದ ಮರುದಿನವೆ ಹಾಳೂರ
ಶುನಕನಂತಕ್ಕು ಸರ್ವಜ್ಞ.


🌺
ಕಣ್ಣು ನಾಲಿಗೆ ಮನವು ತನ್ನದೆಂದೆನಬೇಡ
ಅನ್ಯರು ಕೊಂದರೆನಬೇಡ ಇವು ಮೂರು
ತನ್ನ ಕೊಲ್ಲುವವು ಸರ್ವಜ್ಞ.


🌺
ಇದ್ದಲ್ಲಿ ಸಲುವ ಹೋಗಿದ್ದಲ್ಲಿಯೂ ಸಲುವ
ವಿದ್ಯೆಯನು ಬಲ್ಲ ಬಡವ ತಾ ಗಿರಿಯ
ಮೇಲಿದ್ದರೂ ಸಲುವ ಸರ್ವಜ್ಞ.


🌺
ಮಾತು ಮಾತಿಗೆ ತಕ್ಕ ಮಾತು ಕೋಟಿಗಳುಂಟು
ಮಾತಾಡಿ ಮನಕೆ ಮುನಿಸಕ್ಕು ಮಾತಿನಲಿ
ಸೋತವನೇ ಜಾಣ ಸರ್ವಜ್ಞ.


🌺
ಮಾತಿನಿಂ ನಗೆನುಡಿಯು ಮಾತಿನಿಂ ಹಗೆಕೊಲೆಯು
ಮಾತಿನಿಂ ಸರ್ವ ಸಂಪದವು ಲೋಕಕ್ಕೆ
ಮಾತೆ ಮಾಣಿಕವು ಸರ್ವಜ್ಞ.


🌺
ಮಾತ ಬಲ್ಲಾತಂಗೆ ಯಾತವದು ಸುರಿದಂತೆ
ಮಾತಾಡಲರಿಯದಾತಂಗೆ ಬರಿ ಯಾತ
ನೇತಾಡಿದಂತೆ ಸರ್ವಜ್ಞ.


🌺
ಮಾತು ಬಲ್ಲಹ ತಾನು ಸೋತು ಹೋಹುದು ಲೇಸು
ಮಾತಿಂಗೆ ಮಾತು ಮಥಿಸಲ್ಕೆ ವಿಧಿ ಬಂದು
ಆತುಕೊಂಡಿಹುದು ಸರ್ವಜ್ಞ.


🌺
ರಸಿಕನಾಡಿದ ಮಾತು ಶಶಿಯುದಿಸಿ ಬಂದಂತೆ
ರಸಿಕನಲ್ಲದವನ ಬರಿ ಮಾತು ಕಿವಿಯೊಳಗೆ
ಕೂರ್ದಸಿಯ ಬಡಿದಂತೆ ಸರ್ವಜ್ಞ.


🌺
ಹೊತ್ತಿಗೊದಗಿದ ಮಾತು ಸತ್ತವನು ಎದ್ದಂತೆ
ಹೊತ್ತಾಗಿ ನುಡಿದ ಮಾತು ಕೈ ಜಾರಿದ
ಮುತ್ತಿನಂತಿಹುದು ಸರ್ವಜ್ಞ.


🌺
ಮಾತು ಬಲ್ಲಾತಂಗೆ ಮಾತೊಂದು ಮಾಣಿಕವು
ಮಾತು ತಾನರಿಯದಧಮಂಗೆ ಮಾಣಿಕವು
ತೂತು ಬಿದ್ದಂತೆ ಸರ್ವಜ್ಞ.


🌺
ಮಾತಿಂಗೆ ಮಾತುಗಳು ಓತು ಸಾಸಿರವುಂಟು
ಮಾತಾಡಿದಂತೆ ನಡೆದರೆ ಕೈಲಾಸಕಾತನೇ
ಒಡೆಯ ಸರ್ವಜ್ಞ.


🌺
ಆಡದಲೆ ಮಾಡುವನು ರೂಢಿಯೊಳಗುತ್ತಮನು
ಆಡಿ ಮಾಡುವನು ಮಧ್ಯಮನು ಅಧಮ ತಾ
ನಾಡಿಯೂ ಮಾಡದವನು ಸರ್ವಜ್ಞ.


🌺
ಕೋಟಿ ವಿದ್ಯೆಗಳಲ್ಲಿ ಮೇಟಿ ವಿದ್ಯೆಯೆ ಮೇಲು
ಮೇಟಿಯಿಂ ರಾಟಿ ನಡೆದುದಲ್ಲದೆ ದೇಶ
ದಾಟವೇ ಕೆಡುಗು ಸರ್ವಜ್ಞ.


🌺
ಸಾಲವನು ಕೊಂಬಾಗ ಹಾಲುಹಣ್ಣುಂಡಂತೆ
ಸಾಲಿಗನು ಬಂದು ಎಳೆವಾಗ ಕಿಬ್ಬದಿಯ
ಕೀಲು ಮುರಿದಂತೆ ಸರ್ವಜ್ಞ.


🌺
ಬೋರಾಡಿ ಸಾಲವನು ಹಾರಾಡಿ ಒಯ್ಯುವನು
ಈರಾಡಿ ಬಂದು ಕೇಳಿದರೆ ಸಾಲಿಗನು
ಚೀರಾಡಿ ಕೊಡನು ಸರ್ವಜ್ಞ.


🌺
ಬೆಂಡಿರದೆ ಮುಳುಗಿದರು ಗುಂಡೆದ್ದು ತೇಲಿದರು
ಬಂಡಿಯಾ ನೊಗವು ಚಿಗಿತರೂ ಸಾಲಿಗನು
ಕೊಂಡದ್ದು ಕೊಡನು ಸರ್ವಜ್ಞ.


🌺
ಇದ್ದೂರ ಸಾಲ ಹೇಗಿದ್ದರೂ ಕೊಳಬೇಡ
ಇದ್ದುದನು ಸೆಳೆದು ಗುದ್ದುತ ಸಾಲವ
ನೊದ್ದು ಕೇಳುವನು ಸರ್ವಜ್ಞ.


🌺
ಉದ್ದರಿಯ ಕೊಟ್ಟಣ್ಣ ಹದ್ದಾದ ಹಾವಾದ
ಎದ್ದೆದ್ದು ಬರುವ ನಾಯಾದ ಮೈಲಾರ
ಗೊಗ್ಗಯ್ಯನಾದ ಸರ್ವಜ್ಞ.


🌺
ಹಾಲು ಬೋನವು ಲೇಸು ಮಾಲೆ ಕೊರಳಿಗೆ ಲೇಸು
ಸಾಲವಿಲ್ಲದವನ ಮನೆ ಲೇಸು ಬಾಲಕರ
ಲೀಲೆ ಲೇಸೆಂದ ಸರ್ವಜ್ಞ.


🌺
ಸಿರಿಯ ಸಂಸಾರವನು ಸ್ಥಿರವೆಂದು ನಂಬದಿರು
ಹಿರಿದೊಂದು ಸಂತೆ ನೆರೆದೊಂದು ಜಾವಕ್ಕೆ
ಹರಿದು ಹೋದಂತೆ ಸರ್ವಜ್ಞ.


🌺
ಅತಿಯಾಸೆ ಮಾಡುವವನು ಗತಿಗೇಡಿಯಾಗುವನು
ಅತಿ ಆಸೆಯಿಂದ ಮತಿ ಕೆಡುಗು ಅತಿಯಿಂದ
ಸತಿಸುತರು ಕೆಡುಗು ಸರ್ವಜ್ಞ.


🌺
ನಲ್ಲ ಒಲ್ಲಿಯನೊಲ್ಲ ನೆಲ್ಲಕ್ಕಿ ಬೋನೊಲ್ಲ
ಅಲ್ಲವನು ಒಲ್ಲ ಮೊಸರೊಲ್ಲ ಯಾಕೊಲ್ಲ ?
ಇಲ್ಲ ಅದಕೊಲ್ಲ ಸರ್ವಜ್ಞ.


🌺
ಕಾಯಕವು ಉಳ್ಳನಕ ನಾಯಕನು ಎನಿಸಿಪ್ಪ
ಕಾಯಕವು ತೀರ್ದ ಮರುದಿನವೇ ಸುಡುಗಾಡ
ನಾಯಕನು ಎನಿಪ ಸರ್ವಜ್ಞ.


🌺
ಆಳಾಗಬಲ್ಲವನು ಆಳುವನು ಅರಸಾಗಿ
ಆಳಾಗಿ ಬಾಳಲರಿಯದವನು ಕಡೆಯಲ್ಲಿ
ಹಾಳಾಗಿ ಹೋಹ ಸರ್ವಜ್ಞ.


🌺
ನಾರಿ ಪರರಿಗುಪಕಾರಿ ನಾರಿ ಸ್ವರ್ಗಕ್ಕೆ ದಾರಿ
ನಾರಿ ಸಕಲರಿಗೆ ಉಪಕಾರಿ ಮುನಿದರಾ
ನಾರಿಯೇ ಮಾರಿ ಸರ್ವಜ್ಞ.


🌺
ಮಾತನೇ ಉಣಕೊಟ್ಟು ಮಾತನೇ ಉಡಕೊಟ್ಟು
ಮಾತಿನ ಮುದ್ದ ತೊಡಕೊಟ್ಟು ಬೆಳಗೆ ಹೋ
ದಾತನೇ ಜಾಣ ಸರ್ವಜ್ಞ.


🌺
ಹಸಿವಿಲ್ಲದುಣಬೇಡ ಹಸಿದು ಮತ್ತಿರಬೇಡ
ಬಿಸಿ ಮಾಡಿ ತಂಗುಳುಣಬೇಡ ವೈದ್ಯನಾ
ಗಸಣೆಯೇ ಬೇಡ ಸರ್ವಜ್ಞ.


🌺
ನಾಲಿಗೆಯ ಕಟ್ಟಿದನು ಕಾಲನಿಗೆ ದೂರನಹ
ನಾಲಿಗೆ ರುಚಿಗಳ ಮೇಲಾಡುತಿರಲವನ
ಕಾಲಹತ್ತರವು ಸರ್ವಜ್ಞ.


🌺
ಕೊಟ್ಟಣವ ಕುಟ್ಟುವುದು ಮೊಟ್ಟೆಯನು ಹೊರಿಸುವುದು
ಬಿಟ್ಟಿಕೂಲಿಗಳ ಮಾಡಿಸುವುದು ಗೇಣು
ಹೊಟ್ಟೆ ಕಾಣಯ್ಯ ಸರ್ವಜ್ಞ.


🌺
ಸಾಲವನು ಮಾಡುವದು ಹೇಲ ತಾ ಬಳಿಸುವುದು
ಕಾಲಿನಾ ಕೆಳಗೆ ಕೆಡಹುವದು ತುತ್ತಿನಾ
ಚೀಲ ಕಾಣಯ್ಯ ಸರ್ವಜ್ಞ.


🌺
ಕುಲವನ್ನು ಕೆಡಿಸುವದು ಛಲವನ್ನು ಬಿಡಿಸುವದು
ಹೊಲೆಯನಾ ಮನೆಯ ಹೊಗಿಸುವದು ಕೂಳಿನಾ
ಬಲವ ನೋಡೆಂದ ಸರ್ವಜ್ಞ.


🌺
ಅಟ್ಟಿ ಹರಿದಾಡುವದು ಬಟ್ಟೆಯಲಿ ಮೆರೆಯುವದು
ಹೊಟ್ಟೆ ಹುಣ್ಣಾಗಿ ನಗಿಸುವದು ಒಂದು ಹಿಡಿ
ಹಿಟ್ಟು ಕಾಣಯ್ಯಾ ಸರ್ವಜ್ಞ.


🌺
ಉಕ್ಕುವದು ಸೊಕ್ಕುವದು ಕೆಕ್ಕನೇ ಕೆಲೆಯುವದು
ರಕ್ಕಸನವೋಲು ಮದಿಸುವದು ಒಂದು ಸೆರೆ
ಯಕ್ಕಿಯಾ ಗುಣವು ಸರ್ವಜ್ಞ.


🌺
ಬಟ್ಟೆಯನು ಉಡಿಸುವದು ಸೆಟ್ಟಿಯೆಂದೆನಿಸುವದು
ಕಟ್ಟಾಣಿ ಸತಿಯ ಕುಣಿಸುವದು ತಾ ಚೋಟು
ಹೊಟ್ಟೆ ಕಾಣಯ್ಯ ಸರ್ವಜ್ಞ.


🌺
ನೇತ್ರಗಳು ಕಾಣಿಸವು ಶ್ರೋತ್ರಗಳು ಕೇಳಿಸವು
ಗಾತ್ರಗಳು ಎದ್ದು ನಡೆಯುವವು ಕೂಳೊಂದು
ರಾತ್ರಿ ತಪ್ಪಿದರೆ ಸರ್ವಜ್ಞ.


🌺
ಅಡಿಗಳೆದ್ದೇಳವವು ನುಡಿಗಳೂ ಕೇಳಿಸವು
ಮಡದಿಯರ ಮಾತು ಸೊಗಸದು ಕೂಳೊಂದು
ತಡೆದರಗಳಿಗೆ ಸರ್ವಜ್ಞ.


🌺
ನಿದ್ದೆಗಳು ಬಾರವವು ಬುದ್ಧಿಗಳು ತಿಳಿಯವವು
ಮುದ್ದಿನಾ ಮಾತು ಸೊಗಸವವು ಬೋನದಾ
ಮುದ್ದೆ ತಪ್ಪಿದರೆ ಸರ್ವಜ್ಞ.


🌺
ಎತ್ತ ಹೋದರು ಒಂದು ತುತ್ತು ಕಟ್ಟಿರಬೇಕು
ತುತ್ತೊಂದು ಗಳಿಗೆ ತಡೆದಿಹರೆ ಕೈ ಹಿಡಿದು
ಎತ್ತಬೇಕೆಂದ ಸರ್ವಜ್ಞ.


🌺
ತಿತ್ತಿ ಹೊಟ್ಟೆಗೆ ಒಂದು ತುತ್ತು ತಾ ಹಾಕುವದು
ತುತ್ತೆಂಬ ಶಿವನ ಬಿಟ್ಟಿಹರೆ ಸುಡುಗಾಡಿ
ಗೆತ್ತಬೇಕೆಂದ ಸರ್ವಜ್ಞ.


🌺
ಅನ್ನದೇವರ ಮುಂದೆ ಇನ್ನು ದೇವರು ಉಂಟೇ ?
ಅನ್ನವಿರುವ ತನಕ ಪ್ರಾಣವೀ ಜಗದೊಳಗೆ
ಅನ್ನವೇ ದೈವ ಸರ್ವಜ್ಞ.


🌺
ಅನ್ನವನು ಇಕ್ಕುವದು ನನ್ನಿಯನು ನುಡಿಯುವುದು
ತನ್ನಂತೆ ಪರರ ಬಗೆದಡೆ ಕೈಲಾಸ
ಬಿನ್ನಾಣವಕ್ಕು ಸರ್ವಜ್ಞ.


🌺
ಬಲ್ಲವರ ಒಡನಾಟ ಬೆಲ್ಲವನು ಮೆದ್ದಂತೆ
ಅಲ್ಲದಹುದೆಂಬ ಅಜ್ಞಾನಿಯೊಡನಾಟ
ಕಲ್ಲು ಹಾದಂತೆ ಸರ್ವಜ್ಞ.


🌺
ಎಣಿಸುತಿರ್ಪುದು ಬಾಯಿ ಪೊಣರುತಿರ್ಪುದು ಬೆರಲು
ಕ್ಷಣಕೊಮ್ಮೆಯೊಂದ ಗುಣಿಸುವವನ ಜಪಕೊಂದು
ಎಣಿಕೆಯದುಂಟೆ ಸರ್ವಜ್ಞ.


🌺
ಭಿಕ್ಷವ ತಂದಾದೊಡಂ ಭಿಕ್ಷವನಿಕ್ಕುಣಬೇಕು
ಅಕ್ಷಯಪದವು ತನಗಕ್ಕು ಇಕ್ಕದೊಡೆ
ಭಿಕ್ಷುಕನೆಯಕ್ಕು ಸರ್ವಜ್ಞ.


🌺
ಮಾನವನ ದುರ್ಗುಣವನೇನೆಂದು ಬಣ್ಣಿಸುವೆ
ದಾನವಗೈಯೆನಲು ಕನಲುವ ದಂಡವನು
ಮೌನದಿಂ ತೆರುವ ಸರ್ವಜ್ಞ.


🌺
ಅಕ್ಕರವ ಕಲಿತಾತ ಒಕ್ಕಲನು ತಿನಕಲಿತ
ಲೆಕ್ಕವ ಕಲಿತ ಕರಣಿಕನು ನರಕದಲಿ
ಹೊಕ್ಕಿರಲು ಕಲಿತ ಸರ್ವಜ್ಞ.


🌺
ಉತ್ತೊಮ್ಮೆ ಹರಗುವುದು ಬಿತ್ತೊಮ್ಮೆ ಹರಗುವುದು
ಮತ್ತೊಮ್ಮೆ ಹರಗಿ ಕಳೆದೆಗೆದು ಬೆಳೆಯೆ
ತನ್ನೆತ್ತರ ಬೆಳವ ಸರ್ವಜ್ಞ.


🌺
ಕ್ಷೇತ್ರವರಿಯದ ಬೀಜ ಪಾತ್ರವರಿಯದ ದಾನ
ಸಾತ್ವಿಕವನರಿಯದನ ಧರ್ಮದರ್ದಿಗನು
ಮೂತ್ರಗೈದಂತೆ ಸರ್ವಜ್ಞ.


🌺
ಅಕ್ಕರ ಹದಿನಾರುಲಕ್ಕ ಓದಿದರೇನು
ತಕ್ಕುದನರಿಯ ದಯವಿಲ್ಲದವನೋದು
ರಕ್ಕಸರೋದು ಸರ್ವಜ್ಞ.


🌺
ಹಲವನೋದಿದಡೇನು ಚೆಲುವನಾದಡೆಯೇನು
ಕುಲವಂತನಾಗಿ ಫಲವೇನು ಲಿಂಗದ
ಒಲವಿಲ್ಲದನಕ ಸರ್ವಜ್ಞ.


🌺
ಲಿಂಗ ಉಳ್ಳನೆ ಪುರುಷ ಲಿಂಗ ಉಳ್ಳನೆ ಸರಸ
ಲಿಂಗ ಉಳ್ಳವಗೆ ರತಿಭೋಗ ವತುಳಸುಖ
ಲಿಂಗದಿಂ ಜನನ ಸರ್ವಜ್ಞ.


🌺
ನಡೆಯುವುದೊಂದೇ ಭೂಮಿ ಕುಡಿವುದೊಂದೇ ನೀರು
ಸುಡುವಗ್ನಿಯೊಂದೇ ಇರುತಿರಲು ಕುಲಗೋತ್ರ
ನಡುವೆ ಎತ್ತಣದು? ಸರ್ವಜ್ಞ.


🌺
ಜಾತಿಹೀನನ ಮನೆಯ ಜ್ಯೋತಿ ತಾ ಹೀನವೇ ?
ಜಾತಿವಿಜಾತಿಯೆನಬೇಡ ದೇವನೊಲಿದಾತನೇ
ಜಾತ ಸರ್ವಜ್ಞ.


🌺
ಎತ್ತಾಗಿ ತೊತ್ತಾಗಿ ಹಿತ್ತಲದ ಗಿಡವಾಗಿ
ಮತ್ತೆ ಪಾದದಾ ಕೆರವಾಗಿ ಗುರುವಿನಾ
ಹತ್ತಿಲಿರು ಸರ್ವಜ್ಞ.


🌺
ವಿದ್ಯೆ ಕಲಿತರೆ ಇಲ್ಲ ಬುದ್ಧಿ ಕಲಿತರೆ ಇಲ್ಲ
ಉದ್ಯೋಗ ಮಾಡಿದರೆ ಇಲ್ಲ ಗುರುಕರುಣ
ವಿದ್ದಲ್ಲದಿಲ್ಲ ಸರ್ವಜ್ಞ.


🌺
ಎತ್ತ ಹೋದರೆ ಮನ ಹತ್ತಿಕೊಂಡಿರುತಿಹುದು
ಮತ್ತೊಬ್ಬ ಮುನಿದು ಕೊಳಲರಿಯ ಜ್ಞಾನದಾ
ಬಿತ್ತು ಲೇಸಯ್ಯ ಸರ್ವಜ್ಞ.

ರಾಷ್ಟ್ರೀಯ ವಿಜ್ಞಾನ ದಿನ

 


ರಾಷ್ಟ್ರೀಯ ವಿಜ್ಞಾನ ದಿನ

ಫೆಬ್ರುವರಿ 28 ಭಾರತೀಯ ವಿಜ್ಞಾನಕ್ಕೊಂದು ಪರ್ವ ದಿನ.  1928ರ ಇದೇ ದಿನದಂದು ಮಹಾನ್ ವಿಜ್ಞಾನಿ ಸರ್ ಸಿ ವಿ ರಾಮನ್ ಅವರು ವಿಶ್ವಪ್ರಸಿದ್ಧವಾದ ‘ರಾಮನ್ ಎಫೆಕ್ಟ್’ ಸಂಶೋಧನೆಯ ವಿವರಗಳನ್ನು ಜಗತ್ತಿಗೆ ಬಹಿರಂಗಪಡಿಸಿದರು.

ಮೆಡಿಟರೇನಿಯನ್ ಸಮುದ್ರದಲ್ಲಿ ಪಯಣಿಸುತ್ತಿದ್ದ ಸಿ ವಿ ರಾಮನ್ ಅವರು ಕಡಲಿನ ನೀಲಿ ಬಣ್ಣವನ್ನು ಕಂಡು ಆ ಸೊಬಗಿಗೆ ಪರವಶರಾದದ್ದು ಮಾತ್ರವಲ್ಲ, ಅವರಿಗೆ ನೀರಿನ ಬಣ್ಣ ಅದು ಹೇಗೆ ನೀಲಿಯಾಗಿದೆ ಎಂಬ ಸೋಜಿಗ ಕೂಡಾ ಉಂಟಾಯಿತು.  ಆಕಾಶವೂ ನೀಲಿ, ಸಮುದ್ರವೂ ನೀಲಿ.  ಹಾಗಾದರೆ ಆಕಾಶದ ಪ್ರತಿಫಲನ ನೀರಿನ ಮೇಲೆ ಕಾಣುತ್ತಿದೆಯೇ ಇಲ್ಲ ಇದಕ್ಕೆ ಇನ್ನೇನಾದರೂ  ಕಾರಣ ಇರಬಹುದೇ ಎಂದು ತೀವ್ರವಾಗಿ ಚಿಂತಿಸಿದ ಅವರಿಗೆ “ಸೂರ್ಯನ ಬೆಳಕು ನೀರಿನ ಕಣ ಕಣದಲ್ಲೂ  ಹರಡಿಕೊಳ್ಳುವುದೇ ಸಮುದ್ರವು ನೀಲಿಯಾಗಿ ಕಾಣುವುದಕ್ಕೆ ಕಾರಣ” ಎಂದು ದೃಢಪಟ್ಟಿತು.   ಆ ಕ್ಷಣದಿಂದಲೇ ತಮ್ಮ ತೀವ್ರವಾದ ಸಂಶೋಧನೆಗಳನ್ನು ನಡೆಸಿದ ರಾಮನ್ ದ್ರವಗಳಲ್ಲಿ ಬೆಳಕಿನ ಸಂಚಲನೆಯ ಕುರಿತಾದ ಸುದೀರ್ಘ ಅಧ್ಯಯನವನ್ನು ಕೈಗೊಂಡು ಆ ಪ್ರಯೋಗಗಳ ಪರಿಣಾಮವನ್ನು ವೈಜ್ಞಾನಿಕ ಲೋಕದೆದುರು ತೆರೆದಿಟ್ಟರು.  ಈ ಸಂಶೋಧನೆಗಾಗಿ ರಾಮನ್ ಅವರಿಗೆ ನೋಬಲ್ ಪಾರಿತೋಷಕ ಸಂದಿತು ಎಂಬುದು ನಮಗೆಲ್ಲಾ ತಿಳಿದಿರುವ ವಿಚಾರ. ರಾಮನ್ ಅವರ ಈ ಸಂಶೋಧನೆಯ ಗೌರವಾರ್ಥವಾಗಿ ಈ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದೆ. 

ಇಂದು ಬಾಹ್ಯಾಕಾಶ, ಪರಮಾಣು ವಿಜ್ಞಾನ, ಮಾಹಿತಿ ವಿಜ್ಞಾನ, ಜೈವಿಕ ತಂತ್ರಜ್ಞಾನ, ವೈದ್ಯಕೀಯ  ಕ್ಷೇತ್ರಗಳಲ್ಲೂ ಸೇರಿದಂತೆ ದೇಶದ ವಿಜ್ಞಾನಿಗಳು ಕೊಟ್ಟಿರುವ ಕೊಡುಗೆ ಮಹತ್ವದ್ದು ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಎಲ್ಲವನ್ನೂ ಹಾಲು ಕರೆಯುವ ಹಸು ಎಂದು  ಕಾಣುವಂತಹ ಇಂದಿನ  ವ್ಯಾಪಾರೀ ಮನೋಧರ್ಮದಲ್ಲಿ ಹೊಸ ಪೀಳಿಗೆಯ ತಲೆಮಾರುಗಳು ಸಂಶೋಧನಾ ಕ್ಷೇತ್ರಗಳತ್ತ ಮೊಗ ಮಾಡುತ್ತಿರುವುದು ಕಡಿಮೆಯಾಗುತ್ತಿದೆ ಎಂಬುದು ಸುಳ್ಳಲ್ಲ.  ಹಾಗೆ ಆಸಕ್ತರಿದ್ದರೂ ಅವರು ಅನಿವಾರ್ಯವೆಂಬಂತೆ ಅಮೆರಿಕಕ್ಕೆ ಜಾರುತ್ತಾರೆ. 

ವಿದ್ಯಾರ್ಥಿಗಳನ್ನು ಯಾಂತ್ರಿಕವಾಗಿ ಪ್ರಶ್ನಪತ್ರಿಕೆಗಳ ವ್ಯವಸ್ಥೆಗೆ ಹೊಂದಿಕೊಳ್ಳುವಂತೆ ಮಾಡಿ ಅವರಲ್ಲಿ ಪ್ರಾಯೋಗಿಕವಾಗಿ ವಿಜ್ಞಾನದ ಚಿಂತನೆಯ ಶಕ್ತಿಯನ್ನು ಕುಂಠಿತಗೊಳಿಸುವ ಗುಡ್ಡಿಪಾಠದ  ಪ್ರವೃತ್ತಿ ದೇಶದಾದ್ಯಂತ ಇಂದು ವ್ಯಾಪಿಸಿಕೊಂಡುಬಿಟ್ಟಿದೆ.  ವೈಜ್ಞಾನಿಕ ಕ್ಷೇತ್ರದ ಕೆಲವೊಂದು ನಿಲುವುಗಳು ಅನಪೇಕ್ಷಿತವಾಗಿ ರಾಜಕೀಯ ಬಣ್ಣ ತಳೆದುಕೊಂಡು, ವಿಜ್ಞಾನದ ವ್ಯವಸ್ಥೆಗಳ ಕುರಿತಾಗಿ  ಅಪ್ರಬುದ್ಧ ರಾಜಕಾರಣಿಗಳ ಅನುಚಿತ ಮಾತುಗಳಿಗೆ ಕೂಡಾ ಪ್ರೇರಿತವಾಗಿರುವುದು, ವಿಜ್ಞಾನ ನಮ್ಮ ದೇಶದಲ್ಲಿ ಪಡೆದುಕೊಳ್ಳುತ್ತಿರುವ ದುರ್ಗತಿಗೆ ವಿಶ್ಲೇಷಣೆಯಾಗುತ್ತಿದೆಯೇನೋ ಎಂಬ ನಿರಾಶೆ ಕೂಡಾ ಹಬ್ಬುತ್ತಿದೆ. 

ವಿಜ್ಞಾನದ ಹೊಸ ಹೊಸ ಆವಿಷ್ಕಾರಗಳು ಬರುತ್ತಿರುವ ಹಾಗೆಲ್ಲಾ ಮನುಷ್ಯ ಅವುಗಳ ಉಪಯೋಗಕ್ಕಾಗಿ ನಿಸರ್ಗವನ್ನು ಬರಿದು ಮಾಡುತ್ತಿದ್ದಾನೆ ಎಂಬುದು ಕೂಡಾ ಸತ್ಯವಾದ ವಿಚಾರ.  ಕುಡಿಯುವ ನೀರು, ಪೆಟ್ರೋಲ್, ಗಿಡ, ಮರ, ಬೆಟ್ಟ ಗುಡ್ಡಗಳನ್ನೆ ಅಲ್ಲದೆ ತನ್ನಂತೆಯೇ ಇರುವ ಇತರ ಮನುಷ್ಯ ಜೀವಿಗಳನ್ನೂ  ಒಳಗೊಂಡಂತೆ ಎಲ್ಲ ತರಹದ ಜೀವಿಗಳನ್ನೂ ತನ್ನ ಅಹಮಿಕೆಯಲ್ಲಿ ಮರೆತು, ಶಕ್ತಿ ಮೀರಿ ಎಂಬಂತೆ ಪ್ರಾಕೃತಿಕ ಸಮತೋಲನವನ್ನು ಹಾಳುಗೆಡವಿ ವಿಶ್ವವನ್ನು ಬಿರುಸಿನಿಂದ ವಿನಾಶದೆಡೆಗೆ ಕೊಂಡೊಯ್ಯುತಿದ್ದಾನೆ.  ತನ್ನ ಬಯಕೆಗಳ ಪೂರೈಕೆ ವಿಚಾರ ಬಂದಾಗ ವಿಜ್ಞಾನವನ್ನು ಪೂಜಿಸಿ ಆರಾಧಿಸುವ ಸೋಗು ಹಾಕುವ ಮಾನವ, ತನ್ನ ನಡವಳಿಕೆಗಳ ವಿಚಾರ ಬಂದಾಗ ಮಾತ್ರ ವೈಜ್ಞಾನಿಕ ಚಿಂತನೆಯನ್ನು ಪಕ್ಕಕ್ಕಿಟ್ಟು ಕೆಲಸ ಮಾಡುತ್ತಿದ್ದಾನೆ.  ಇಂತಹ ವಿಜ್ಞಾನದ ದಿನಗಳು ವರ್ಷದ ಒಂದು ದಿನವಾಗುವುದಕ್ಕಿಂತ ಹೆಚ್ಚಾಗಿ ನಮ್ಮ ದೈನಂದಿನದಲ್ಲಿ ವೈಯಕ್ತಿಕವಾಗಿ ಹಾಗೂ ಸಾಮಾಜಿಕವಾಗಿ ಅಂತರ್ಗತವಾಗಬೇಕಾದ ಅವಶ್ಯಕತೆ ಹಿಂದೆಂದಿಗಿಂತಲೂ ಹೆಚ್ಚಾಗಿದೆ. 

ಈ ವಿಚಾರದಲ್ಲಿ ಸರ್ ಸಿ. ವಿ. ರಾಮನ್ ಅವರ ಮಾತು ಮನನಯೋಗ್ಯವಾಗಿದೆ: “ವಿಜ್ಞಾನದ ತಿಳುವಳಿಕೆಯಿರುವ ಮನುಷ್ಯ ನಿಸರ್ಗದ ಸೌಂದರ್ಯವನ್ನು  ತನ್ನ ತಿಳುವಳಿಕೆಯ ಕಣ್ಣುಗಳಿಂದ ನೋಡುತ್ತಾನೆ ಮಾತ್ರವಲ್ಲ ಆ ಸೌಂದರ್ಯ ಮುದುಡಿಹೋಗದಂತೆ ಕೂಡಾ ಜಾಗರೂಕನಾಗಿರುತ್ತಾನೆ.  ಜ್ಞಾನವೆಂಬುದು ನಾವು ಜಗತ್ತನ್ನು ನೋಡುವ ರೀತಿಗೆ ಹೊಸ ದೃಷ್ಟಿ ಕೊಡುವುದರ ಜೊತೆಗೆ ಸೌಂದರ್ಯವನ್ನು ಆರಾಧಿಸುವ ಮನೋಭಾವವನ್ನೂ ಸೃಜಿಸುತ್ತದೆ”.  ನಾವು ಇಂತಹ ಪ್ರಾಜ್ಞತೆಯನ್ನು ಉಳಿಸಿಕೊಂಡಿದ್ದೇವೆಯೇ ಎಂಬ ಆತ್ಮಾವಲೋಕನ ಮಾತ್ರವೇ ನಿಜವಾದ ವಿಜ್ಞಾನ ದಿನದ ಆಚರಣೆಯಾದೀತು.

ಈ ಎಲ್ಲ ಚಿಂತನೆಗಳ ನಡುವೆ ನಮ್ಮ ಬದುಕನ್ನು ಹಸನು ಮಾಡಿರುವ ಸರ್ ಸಿ ವಿ ರಾಮನ್ ಅವರಂತಹ ಸಕಲ ಶ್ರೇಷ್ಠ ವಿಜ್ಞಾನ ತಪಸ್ವೀ ಋಷಿವರ್ಯರುಗಳಿಗೆ ನಮ್ಮ ಸಾಷ್ಟಾಂಗ ಪ್ರಣಾಮಗಳನ್ನು ಸಲ್ಲಿಸೋಣ.

ವಿಶ್ವ ಮಹಿಳಾ ದಿನಾಚರಣೆ

 


ವಿಶ್ವ ಮಹಿಳಾ ದಿನಾಚರಣೆ


ಹೆತ್ತು ಹೊತ್ತು ಸಾಕಿ ಸಲಹುವವಳು ಮಹಿಳೆ. ಅಕ್ಕ, ತಂಗಿ, ಪುತ್ರಿ, ಪತ್ನಿಯಾಗಿ ಜೀವನ ತುಂಬುವವಳೂ ಅವಳೇ. ಇಂತಹ ಮಹಿಳೆಗೆ ಜಗತ್ತಿನಲ್ಲಿ ಮಹಿಳೆಗೆ ಅಪೂರ್ವ ಸ್ಥಾನವಿದೆ. ಇದನ್ನು ನೆನೆಸಿಕೊಡುವಂತೆ ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಿಸಲಾಗುತ್ತದೆ. ಮಹಿಳಾ ದಿನದ ನಿಟ್ಟಿನಲ್ಲಿ ಭಾರತದ "ಮೊದಲಿಗ' ಮಹಿಳೆಯರ ಬಗ್ಗೆ, ಮಹಿಳೆ ಆಧಾರಿತ ಚಿತ್ರಗಳು, ಸ್ಫೂರ್ತಿದಾಯಕ ಮಾತುಗಳ ಗೊಂಚಲುಗಳು ಇಲ್ಲಿವೆ.

ಭಾರತದ ಮೊದಲಿಗ ಮಹಿಳೆಯರು:



ಮದರ್‌ ತೆರೇಸಾ

ಸಮಾಜ ಸೇವೆಗೆ ಮತ್ತೂಂದು ಹೆಸರು. ದೀನರು, ಬಡ ಮಕ್ಕಳು, ರೋಗಿಗಳ ಆರೈಕೆಯಲ್ಲಿ ವಿಶ್ವಕ್ಕೇ ಹೆಸರಾದವರು. ದೇಶದಲ್ಲಿ ಹಲವು ಮಿಷನರಿಗಳ ಮೂಲಕ ಸಮಾಜ ಸೇವಾ ಕೈಂಕರ್ಯವನ್ನು ನಡೆಸಿದರು. ಅವರ ನಿಧನಾ ನಂತರವೂ ತೆರೇಸಾ ಹೆಸರಲ್ಲಿ ಈ ಕೆಲಸಗಳು ಮುಂದುವರಿಯುತ್ತಿವೆ.

ಇಂದಿರಾ ಗಾಂಧಿ

ದೇಶದ ಮೊದಲ ಮಹಿಳಾ ಪ್ರಧಾನಿ. ಅತಿ ಪ್ರಭಾವಿಯೂ ಹೌದು. ಸುಮಾರು 20 ವರ್ಷಗಳ ಕಾಲ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸಿದವರು. ಬಾಂಗ್ಲಾ ವಿಮೋಚನೆಯಲ್ಲಿ ದಿಟ್ಟತನ ಪ್ರದರ್ಶಿಸಿದವರು. ಧೈರ್ಯ, ಛಲಕ್ಕೆ ಇಂದಿರಾ ಹೆಸರಾಗಿದ್ದಾರೆ. ಬಿಬಿಸಿಯ ಶತಮಾನದ ಮಹಿಳೆ ಎಂಬ ಬಿರುದಿಗೆ ಪಾತ್ರವಾಗಿದ್ದರು.

ಕಿರಣ್‌ ಬೇಡಿ



ಭಾರತದ ಮೊತ್ತ ಮೊದಲ ಮಹಿಳಾ ಐಪಿಎಸ್‌ ಅಧಿಕಾರಿ. ದೇಶದ ಹಲವಾರು ಮಹಿಳಾ ಅಧಿಕಾರಿಗಳಿಗೆ ಸ್ಫೂರ್ತಿಯಾದವರು. ತಿಹಾರ್‌ ಜೈಲಿನ ಜೈಲಧಿಕಾರಿಯಾಗಿ ಹಲವು ಬದಲಾವಣೆಗೆ ಕಾರಣವಾದವರು. ದಿಟ್ಟ ಪೊಲೀಸ್‌ ಅಧಿಕಾರಿ ಎಂದೇ ಪ್ರಸಿದ್ಧರಾದ ಬೇಡಿ, ಭ್ರಷ್ಟಾಚಾರ ವಿರೋಧಿ ಹೋರಾಟದಲ್ಲೂ ಭಾಗಿಯಾಗಿದ್ದರು.

ಪ್ರತಿಭಾ ಪಾಟೀಲ್‌

ದೇಶದ 12ನೇ ರಾಷ್ಟ್ರಪತಿಯಾಗಿ 2007ರಿಂದ 2012ರವರೆಗೆ ಹುದ್ದೆಯಲ್ಲಿದ್ದರು. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಆಡಳಿತ ವೇಳೆ ಹಲವು ಸಚಿವ ಸ್ಥಾನಗಳನ್ನು ನಿಭಾಯಿಸಿದ್ದರು. ರಾಜ್ಯಸಭೆಯ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 2004ರಿಂದ 2007ರವರೆಗೆ ರಾಜಸ್ಥಾನದ ರಾಜ್ಯಪಾಲರಾಗಿಯೂ ಇದ್ದರು.

ಮೇರಿ ಕೋಮ್‌
ಅಪ್ರತಿಮ ಬಾಕ್ಸರ್‌. ಓರ್ವ ತಾಯಿಯಾಗಿ ಐದು ಬಾರಿ ವಿಶ್ವ ಅಮೆಚೂÂರ್‌ ಬಾಕ್ಸಿಂಗ್‌ ಚಾಂಪಿಯನ್‌ ಶಿಪ್‌ನಲ್ಲಿ ಪದಕ ಮುಡಿಗೇರಿಸಿಕೊಂಡವರು. 2012 ಲಂಡನ್‌ ಒಲಿಂಪಿಕ್ಸ್‌ನಲ್ಲಿ ದೇಶಕ್ಕೆ ಕಂಚಿನ ಪದಕ ತಂದುಕೊಟ್ಟವರು. ದೇಶದ ಮಹಿಳಾ ಕ್ರೀಡಾಪಟುಗಳಿಗೆ ಮಣಿಪುರದ ಮೇರಿ ಕೋಮ್‌ ಸ್ಫೂರ್ತಿಯಾಗಿದ್ದಾರೆ.
ನ್ಯಾ.ಫಾತಿಮಾ ಬೀವಿ
ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶೆ. ಅಲ್ಪಸಂಖ್ಯಾತ ಸಮುದಾಯದಿಂದ ಅತ್ಯುನ್ನತ ಹುದ್ದೆಗೇರಿದ ಮೊದಲ ಮಹಿಳೆಯೂ ಹೌದು. 1989ರಲ್ಲಿ ಅವರು ಸುಪ್ರೀಂ ಕೋರ್ಟ್‌ಗೆ ನೇಮಕವಾಗಿದ್ದರು. 1984ರಿಂದ 1980ರವರೆಗೆ ಕೇರಳ ಹೈಕೋರ್ಟ್‌ ನ್ಯಾಯಾಧೀಶೆಯಾಗಿಯೂ ಸೇವೆ ಸಲ್ಲಿಸಿದ್ದರು.

ಮೇ.ಪ್ರಿಯಾ ಝಿಂಗಮ್‌

ಭಾರತೀಯ ಭೂ ಸೇನೆಯಲ್ಲಿ ಮೊದಲ ಮಹಿಳಾ ಅಧಿಕಾರಿ. 1992ರಲ್ಲಿ ಮಹಿಳೆಯರನ್ನೂ ಸೇನೆಗೆ ಸೇರಿ ಇಕೊಳ್ಳುವಂತೆ ಅವರು ಸೇನಾಮುಖ್ಯಸ್ಥರಿಗೆ ಪತ್ರ ಬರೆದು ಪ್ರಸಿದ್ಧವಾಗಿದ್ದರು. ಬಳಿಕ 24 ಮಹಿಳೆಯರನ್ನು ನಿಯೋಜಿಸಲಾಗಿತ್ತು. ಮೇಜರ್‌ ಹುದ್ದೆಯಲ್ಲಿ ಪ್ರಿಯಾ ಅವರು ಸೇವೆ ಸಲ್ಲಿಸಿದ್ದರು.
ಕಲ್ಪನಾ ಚಾವ್ಲಾ
ಭಾರತ ಮೂಲದ ಮೊದಲ ಮಹಿಳಾ ಗಗನಯಾತ್ರಿ. 1997ರಲ್ಲಿ ಮೊದಲ ಬಾರಿಗೆ ಕಲ್ಪನಾ ಚಾವ್ಲಾ ಅವರು ನಾಸಾದ ಮೂಲಕ ಗಗನಯಾತ್ರೆ ಕೈಗೊಂಡಿದ್ದರು. ರೊಬೊಟಿಕ್‌ ಆರ್ಮ್ ಆಪರೇಟರ್‌ ಆಗಿ ಅವರು ಕರ್ತವ್ಯ ನಿರ್ವಹಿಸಿದ್ದರು. 2003ರಲ್ಲಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಮರಳುತ್ತಿರುವ ವೇಳೆ ಸಂಭವಿಸಿದ ದುರಂತದಲ್ಲಿ ಅವರು ಮಡಿದಿದ್ದರು.ಹೆತ್ತು ಹೊತ್ತು ಸಾಕಿ ಸಲಹುವವಳು ಮಹಿಳೆ. ಅಕ್ಕ, ತಂಗಿ, ಪುತ್ರಿ, ಪತ್ನಿಯಾಗಿ ಜೀವನ ತುಂಬುವವಳೂ ಅವಳೇ. ಇಂತಹ ಮಹಿಳೆಗೆ ಜಗತ್ತಿನಲ್ಲಿ ಮಹಿಳೆಗೆ ಅಪೂರ್ವ ಸ್ಥಾನವಿದೆ. ಇದನ್ನು ನೆನೆಸಿಕೊಡುವಂತೆ ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಿಸಲಾಗುತ್ತದೆ. ಮಹಿಳಾ ದಿನದ ನಿಟ್ಟಿನಲ್ಲಿ ಭಾರತದ "ಮೊದಲಿಗ' ಮಹಿಳೆಯರ ಬಗ್ಗೆ, ಮಹಿಳೆ ಆಧಾರಿತ ಚಿತ್ರಗಳು, ಸ್ಫೂರ್ತಿದಾಯಕ ಮಾತುಗಳ ಗೊಂಚಲುಗಳು ಇಲ್ಲಿವೆ.

ಭಾರತದ ಮೊದಲಿಗ ಮಹಿಳೆಯರು:
ಮದರ್‌ ತೆರೇಸಾ
ಸಮಾಜ ಸೇವೆಗೆ ಮತ್ತೂಂದು ಹೆಸರು. ದೀನರು, ಬಡ ಮಕ್ಕಳು, ರೋಗಿಗಳ ಆರೈಕೆಯಲ್ಲಿ ವಿಶ್ವಕ್ಕೇ ಹೆಸರಾದವರು. ದೇಶದಲ್ಲಿ ಹಲವು ಮಿಷನರಿಗಳ ಮೂಲಕ ಸಮಾಜ ಸೇವಾ ಕೈಂಕರ್ಯವನ್ನು ನಡೆಸಿದರು. ಅವರ ನಿಧನಾ ನಂತರವೂ ತೆರೇಸಾ ಹೆಸರಲ್ಲಿ ಈ ಕೆಲಸಗಳು ಮುಂದುವರಿಯುತ್ತಿವೆ.

ಇಂದಿರಾ ಗಾಂಧಿ
ದೇಶದ ಮೊದಲ ಮಹಿಳಾ ಪ್ರಧಾನಿ. ಅತಿ ಪ್ರಭಾವಿಯೂ ಹೌದು. ಸುಮಾರು 20 ವರ್ಷಗಳ ಕಾಲ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸಿದವರು. ಬಾಂಗ್ಲಾ ವಿಮೋಚನೆಯಲ್ಲಿ ದಿಟ್ಟತನ ಪ್ರದರ್ಶಿಸಿದವರು. ಧೈರ್ಯ, ಛಲಕ್ಕೆ ಇಂದಿರಾ ಹೆಸರಾಗಿದ್ದಾರೆ. ಬಿಬಿಸಿಯ ಶತಮಾನದ ಮಹಿಳೆ ಎಂಬ ಬಿರುದಿಗೆ ಪಾತ್ರವಾಗಿದ್ದರು.

ಕಿರಣ್‌ ಬೇಡಿ
ಭಾರತದ ಮೊತ್ತ ಮೊದಲ ಮಹಿಳಾ ಐಪಿಎಸ್‌ ಅಧಿಕಾರಿ. ದೇಶದ ಹಲವಾರು ಮಹಿಳಾ ಅಧಿಕಾರಿಗಳಿಗೆ ಸ್ಫೂರ್ತಿಯಾದವರು. ತಿಹಾರ್‌ ಜೈಲಿನ ಜೈಲಧಿಕಾರಿಯಾಗಿ ಹಲವು ಬದಲಾವಣೆಗೆ ಕಾರಣವಾದವರು. ದಿಟ್ಟ ಪೊಲೀಸ್‌ ಅಧಿಕಾರಿ ಎಂದೇ ಪ್ರಸಿದ್ಧರಾದ ಬೇಡಿ, ಭ್ರಷ್ಟಾಚಾರ ವಿರೋಧಿ ಹೋರಾಟದಲ್ಲೂ ಭಾಗಿಯಾಗಿದ್ದರು.

ಪ್ರತಿಭಾ ಪಾಟೀಲ್‌
ದೇಶದ 12ನೇ ರಾಷ್ಟ್ರಪತಿಯಾಗಿ 2007ರಿಂದ 2012ರವರೆಗೆ ಹುದ್ದೆಯಲ್ಲಿದ್ದರು. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಆಡಳಿತ ವೇಳೆ ಹಲವು ಸಚಿವ ಸ್ಥಾನಗಳನ್ನು ನಿಭಾಯಿಸಿದ್ದರು. ರಾಜ್ಯಸಭೆಯ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 2004ರಿಂದ 2007ರವರೆಗೆ ರಾಜಸ್ಥಾನದ ರಾಜ್ಯಪಾಲರಾಗಿಯೂ ಇದ್ದರು.

ಮೇರಿ ಕೋಮ್‌
ಅಪ್ರತಿಮ ಬಾಕ್ಸರ್‌. ಓರ್ವ ತಾಯಿಯಾಗಿ ಐದು ಬಾರಿ ವಿಶ್ವ ಅಮೆಚೂರ್‌ ಬಾಕ್ಸಿಂಗ್‌ ಚಾಂಪಿಯನ್‌ ಶಿಪ್‌ನಲ್ಲಿ ಪದಕ ಮುಡಿಗೇರಿಸಿಕೊಂಡವರು. 2012 ಲಂಡನ್‌ ಒಲಿಂಪಿಕ್ಸ್‌ನಲ್ಲಿ ದೇಶಕ್ಕೆ ಕಂಚಿನ ಪದಕ ತಂದುಕೊಟ್ಟವರು. ದೇಶದ ಮಹಿಳಾ ಕ್ರೀಡಾಪಟುಗಳಿಗೆ ಮಣಿಪುರದ ಮೇರಿ ಕೋಮ್‌ ಸ್ಫೂರ್ತಿಯಾಗಿದ್ದಾರೆ.


ಕೃಪೆ: ಉದಯವಾಣಿ